ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ಸಮರ್ಪಕವಾಗಿ ಬಳಸಿ ಯೋಜನೆ ಪೂರ್ಣಗೊಳಿಸಿ : ವಿಕಾಸ್ ಕಿಶೋರ್ ಸುರಳ್ಕರ್

ಎಸ್‌ಸಿಪಿ-ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆ

ಕೊಪ್ಪಳ,: ವಿವಿಧ ಇಲಾಖೆಗಳಿಗೆ ರಾಜ್ಯ ಸರ್ಕಾರದಿಂದ ಬಿಡುಗಡೆಯಾಗುವ ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ನಿಗದಿತ ಅವಧಿಯಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.
ಜಿಲ್ಲಾ ಪಂಚಾಯತನ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಬುಧವಾರದಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ(ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ 2013 ರನ್ವಯ ಅನುಸೂಚಿತ ಜಾತಿಗಳು ಉಪಯೋಜನೆ/ಬುಡಕಟ್ಟು ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ/ ವರ್ಗದ ಅಭಿವೃದ್ಧಿ ಕಾರ್ಯಕ್ರಮಗಳ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇಲಾಖೆಗಳು ಸೂಕ್ತ ರೀತಿಯಲ್ಲಿ ಯೋಜನೆಗಳನ್ನು ರೂಪಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಬಿಡುಗಡೆಯಾದ ಅನುದಾನವನ್ನು ಫಲಾನುಭವಿಗಳಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಿ, ಅವಶ್ಯ ಕ್ರಮಗಳನ್ನು ಕೈಗೊಳ್ಳಬೇಕು. ಇದುವರೆಗೆ ಬಾಕಿ ಉಳಿದ ಹಾಗೂ ಬಳಕೆ ಆಗದ ಅನುದಾನದ ಕುರಿತು ಸೂಕ್ತ ಕಾರಣಗಳೊಂದಿಗೆ ಅಧಿಕಾರಿಗಳು ಮಾಹಿತಿ ನೀಡಬೇಕು. ಅನುದಾನ ಬಳಕೆಯಾದ ವರ್ಷ, ತಿಂಗಳು, ದಿನಾಂಕಗಳ ಸಹಿತ ಪಟ್ಟಿಯನ್ನು ಸಿದ್ದಪಡಿಸಿಕೊಂಡು ವರದಿ ನೀಡಬೇಕು. ಅಧಿಕಾರಿಗಳು ಸಭೆಗೆ ಬರುವಾಗ ನಿಮ್ಮ ಇಲಾಖೆಗಳ ಸಂಪೂರ್ಣ ಮಾಹಿತಿಯೊಂದಿಗೆ ಬರಬೇಕು ಎಂದು ಅವರು ಹೇಳಿದರು.
ಪ್ರಸಕ್ತ ಸಾಲಿನಲ್ಲಿ ಮಂಜೂರಾದ ಅನುದಾನವನ್ನು ವಿಳಂಬ ಮಾಡದೆ ಸಕಾಲದಲ್ಲಿ ಅರ್ಜಿ ಕರೆದು ನಿಗದಿತ ಅವಧಿಯಲ್ಲಿ ಪಾರದರ್ಶಕತೆಯಿಂದ ಫಲಾನುಭವಿಗಳ ಆಯ್ಕೆ ಮಾಡಬೇಕು. ವಿವಿಧ ಯೋಜನೆಯಲ್ಲಿ ನೀಡುವ ಪರಿಕರಗಳಾಗಲಿ, ಇನ್ನಿತರ ಯಾವುದೇ ಯೋಜನೆಗಳ ಸೌಲಭ್ಯಗಳಾಗಲಿ ಗುಣಮಟ್ಟದಿಂದ ಕೂಡಿರಬೇಕು. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲೆಯ ಆಸ್ಪತ್ರೆಗಳಲ್ಲಿ ಅವಶ್ಯವಿರುವ ಆಕ್ಸಿಜನ್ ವ್ಯವಸ್ಥೆಯನ್ನು ಪೂರ್ಣಗೊಳಿಸಲು ಅಗತ್ಯ ಪ್ರಮಾಣದ ಆಕ್ಸಿಜನ್ ಸರಬರಾಜಿನ ಅವಶ್ಯಕತೆಯಿದೆ. ನಮ್ಮ ಜಿಲ್ಲೆಯಲ್ಲಿಯೇ ಆಕ್ಸಿಜನ್ ಪ್ಲಾಂಟ್ ಇದ್ದು, ಅಲ್ಲಿಂದ ಬೇರೆ ಜಿಲ್ಲೆಗಳಿಗೆ ಆಕ್ಸಿಜನ್ ಪೂರೈಕೆಯಾಗುತ್ತಿದೆ. ನಮ್ಮ ಜಿಲ್ಲೆಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸೌಲಭ್ಯದ ಕೊರತೆ ಉಂಟಾಗದAತೆ ಸಂಬAಧಿಸಿದ ಇಲಾಖಾ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಂಡು ಜಿಲ್ಲೆಯ ಎಲ್ಲ ಆಸ್ಪತ್ರೆಗಳಿಗೆ ಆಕ್ಸಿಜನ್ ಸಿಲಿಂಡರ್‌ಗಳನ್ನು ಒದಗಿಸಿ ಸಾರ್ವಜನಿಕರ ಆರೋಗ್ಯ, ಜೀವ ರಕ್ಷಣೆಗೆ ತೊಂದರೆ ಉಂಟಾಗದAತೆ ಕ್ರಮ ಕೈಗೊಳ್ಳಬೇಕು ಎಂದು ಸಂಬAಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿ.ಪಂ. ಸಿಇಒ ರಘುನಂದನ್ ಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಲಕ್ಷö್ಮಣ ಬಬಲಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error