ಗದಗ () ಜೂ. 25 : ಗದಗ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಗದಗ ಜಿಲ್ಲಾ ಆಟೋ ಚಾಲಕರ, ಮಾಲಕರ ಸಂಘ, ಜೈ ಭೀಮ ಆಟೋ ಚಾಲಕರ ಮಾಲಕರ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿರುವ ಮಕ್ಕಳಿಗೆ ಉಚಿತ ಆಟೋ ಸೇವೆಯನ್ನು ಕಲ್ಪಿಸಿದೆ.

ಜೂನ್ 25 ರಿಂದ ಆರಂಭವಾದ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಬರುಯುವ ವಿದ್ಯಾರ್ಥಿಗಳಿಗೆ ಉಚಿತ ಆಟೋ ಸೇವೆಯನ್ನು ನೀಡುತ್ತಿದ್ದು, ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಲು ಮಕ್ಕಳು ಉಚಿತ ಆಟೋ ಸೇವೆ ಪಡೆಯಬಹುದಾಗಿದೆ.
ಉಚಿತ ಆಟೋ ಸೇವೆ ಪಡೆಯಲಿಚ್ಚಿಸುವ ವಿದ್ಯಾರ್ಥಿಗಳು ದೂರವಾಣಿ ಸಂಖ್ಯೆ 9741201718, 9980710869, 7760920345, 9900603707, 8762639378 ಸಂಪರ್ಕಿಸಬೇಕು.
ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಮುಂಜಾಗ್ರತಾ ಕ್ರಮ ವಹಿಸಿ, ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಸುರಕ್ಷಿತ ಹಾಗೂ ಅತ್ಯಂತ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರ ಪ್ರವೇಶಿಸುವಾಗ ಮತ್ತು ಹೊರ ಹೋಗುವಾಗ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ ಮಾಡಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್, ಆಟೋ ಚಾಲಕರ ಮಾಲಕರ ಸಂಘಗಳ ಸಹಯೋಗದಲ್ಲಿ ಉಚಿತ ಆಟೋ ಸೇವೆ ಕ್ರಮ ಜರುಗಿಸಿರುವುದು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದಂತಾಗಿದೆ.