ಎಸ್.ಪಿ.ಬಾಲಸುಬ್ರಹ್ಮಣ್ಯಂ ರವರಿಗೆ ಮಾತೃಭೂಮಿ ಕರವೇ ಸಂಘಟನೆ ಶ್ರದ್ಧಾಂಜಲಿ

.ಎಸ್.ಪಿ.ಬಾಲಸುಬ್ರಹ್ಮಣ್ಯಂ ರವರಿಗೆ  ಮಾತೃಭೂಮಿ ಕರವೇ ಸಂಘಟನೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿತು.

‘ಈ ದೇಶ ಕಂಡ ದಿಗ್ಗಜ ಗಾಯಕ ಬಾಲಸುಬ್ರಹ್ಮಣ್ಯಂ ಅವರು ನಮ್ಮನ್ನು ಅಗಲಿರುವ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ. ಕಳೆದ ಮೂರು ದಿನಗಳಿಂದ ಒಂದಾದ ಮೇಲೊಂದರಂತೆ ಕೆಟ್ಟ ಸುದ್ದಿಗಳೇ ಬರುತ್ತಿರುವುದು ನೋವಿನ ವಿಚಾರ. ಅವರು ಕೊರೋನಾ ಸೋಂಕಿನಿಂದ ಆಸ್ಪತ್ರೆ ಸೇರಿ 51 ದಿನಗಳು ಕಳೆದಿದ್ದು, ನಮ್ಮೆಲ್ಲರಿಗೂ ಅವರ ಆರೋಗ್ಯದ ಬಗ್ಗೆ ಚಿಂತೆ ಇತ್ತು. ಲಕ್ಷಾಂತರ ಅಭಿಮಾನಿಗಳು ಅವರ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸಿದ್ದರು. ಆದರೆ ಆ ಯಮ ನಿಷ್ಕರುಣಿ. ಹೀಗಾಗಿ ನಮ್ಮ ಪ್ರಾರ್ಥನೆ ಫಲಿಸಲಿಲ್ಲ ಎಂದು ರಾಜ್ಯಾಧ್ಯಕ್ಷ ಎಸ್,ಹೆಚ್, ಮುಧೋಳ ತಿಳಿಸಿದರು.
ಇ ಸಂದರ್ಭದಲ್ಲಿ ಜಿಲ್ಲಾ ಯುವಘಟಕ ಅಧ್ಯಕ್ಷ ಕೆ,ಸುಬ್ರಹ್ಮಣ್ಯಂ ಹೆಬ್ಬಾಳ ಕ್ಯಾಂಪ್, ಕರಿಯಪ್ಪನಾಯಕ,ಅನಿಲ್ ಕುಮಾರ್,ನಾಗರಾಜ,ಮಹೇಶ್ ಆನೆಗೊಂದಿ, ಮಲ್ಲಯ್ಯ, ಇನ್ನೂ ಅನೇಕರು ಉಪಸ್ಥಿತರಿದ್ದರು.

Please follow and like us:
error