ಕಂಬದ ಮೇಲೆ ಕೆಲಸ ಮಾಡುತ್ತಿದ್ದ ಕೆಇಬಿ ಲೈನಮನ್ ಸಾವು

ಕೊಪ್ಪಳ : ನಗರದ ಗಣೇಶ ನಗರದಲ್ಲಿ ಕಂಬದ ಮೇಲೆ ಏರಿದ್ದ ಲೈನ್ ಮನ್ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಸಾವನ್ನಪ್ಪಿದವರನ್ನು ಲೈನ್ ಮನ್ ಶರಣಬಸಪ್ಪ ಎಂದು ಗುರುತಿಸಲಾಗಿದೆ. ಗಣೆಶ ನಗರದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾ ಏಕಿ ಕರೆಂಟ್ ಪ್ರವಾಹಿಸಿದ್ದರಿಂದ ಕೆಳಗೆ ಬಿದ್ದಿದ್ದಾರೆ. ಕೂಡಲೇ ಕೆಎಸ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ .

Please follow and like us:
error