ಕನ್ನಡದ ಪ್ರಖ್ಯಾತ ಕವಿ ಎನ್.ಎಸ್. ಲಕ್ಷ್ಮೀ ನಾರಾಯಣ ಭಟ್ಟ ವಿಧಿವಶ

ಕನ್ನಡದ ಪ್ರಖ್ಯಾತ ಕವಿ ಎನ್.ಎಸ್. ಲಕ್ಷ್ಮೀ ನಾರಾಯಣ ಭಟ್ಟರು ಇಂದು ವಿಧಿವಶರಾಗಿದ್ದಾರೆ.

ಹಲವು ದಿನಗಳಿಂದ ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು, ಇಂದು ಮುಂಜಾನೆ 4.45 ಗಂಟೆ ವೇಳೆಗೆ ಬನಶಂಕರಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಎಲ್ಲರಿಗೂ ಸಲ್ಲುವ ಕವಿ ಎಂದೇ ಖ್ಯಾತರಾಗಿದ್ದ ಭಟ್ಟರ ನಿಧನದಿಂದ ಕನ್ನಡ ಕಾವ್ಯ ಹಾಗೂ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.
1936 ಅ.29 ರಂದು ಶಿವಮೊಗ್ಗದಲ್ಲಿ ಜನಿಸಿದ ಭಟ್ಟರ ತಂದೆ ಶಿವರಾಮ ಭಟ್ಟ, ತಾಯಿ ಮೂಕಾಂಬಿಕೆ. ಎಂಎ ಪದವಿ ಪಡೆದ ಬಳಿಕ ಭಟ್ಟರು ಭಾಷಾಶಾಸ್ತ್ರ ಸಂಶೋಧಕರಾಗಿ ಎರಡು ವರ್ಷ ಕೆಲಸ ಮಾಡಿ, ತನ್ನಂತರ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು.
ತುಂಬಾ ಹರಟುವ ಸ್ವಭಾವ, ಸರಳ ಸಜ್ಜನಿಕೆ, ಅತ್ಯುತ್ತಮ ಸ್ಮರಣ ಶಕ್ತಿ, ಯನಂತರ, ತೀನಂಶ್ರೀ ಮಾರ್ಗದರ್ಶನದಲ್ಲಿ ಸಂಶೋಧನ ವೃತ್ತಿಯನ್ನು ಕೈಗೊಂಡರು. 1965ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯವನ್ನು ಸೇರಿ, ಅಧ್ಯಾಪಕ, ರೀಡರ್, ಪ್ರಾಧ್ಯಾಪಕ, ನಿರ್ದೇಶಕ, 1990 ರಲ್ಲಿ ಆರ್ಟ ಫ್ಯಾಕಲ್ಟಿ ಡೀನ್ ಆದರು. ಅಲ್ಲದೇ, ಮೈಸೂರು ವಿಶ್ವವಿದ್ಯಾನಿಲಯದ ಪಿ ಎಚ್‌ಡಿ ಪದವಿಗೆ ಆಧುನಿಕ ಕನ್ನಡ ಕಾವ್ಯ ಕುರಿತು ಪ್ರಬಂಧ ಸಾದರ ಪಡಿಸಿದರು.

ಶಿಶುಸಾಹಿತ್ಯ ಅವರಿಗೆ ಬಹು-ಪ್ರಿಯವಾದ ಪ್ರಕಾರಗಳಲ್ಲಿ ಒಂದು. ಜಗನ್ನಾಥ ವಿಜಯ, ಮುದ್ರಾಮಂಜೂಷ ಕಾವ್ಯಗಳನ್ನು ರಚಿಸಿದ್ದಾರೆ. ಭಟ್ಟರ ಕಾರ್ಯವನ್ನು ಗುರುತಿಸಿ, ಎನ್’ಸಿಆರ್’ಟಿ ಸಂಸ್ಥೆಯಿಂದ ಶಿಶು ಸಾಹಿತ್ಯಕ್ಕಾಗಿ ಬಾಲಸಾಹಿತ್ಯ ಪುರಸ್ಕಾರ ಲಭಿಸಿದೆ. ಅನುವಾದಗಳಲ್ಲಿ ಮುಖ್ಯವಾದವುಗಳು, ಮೃಚ್ಛಕಟಿಕ, ಇಸ್ಪೀಟ್ ರಾಜ್ಯ, ಟ್ವೆಲ್ಫ್ತ್ ನೈಟ್, ಮತ್ತು ಭಾರತೀಯ ಗ್ರಂಥ ಸಂಪಾದನಾ ಪರಿಚಯ, ಕನ್ನಡ ಮಾತು ಎನ್ನುವ ಪುಟ್ಟ-ಗ್ರಂಥ, ಕನ್ನಡ ಭಾಷೆಯನ್ನು ಬೆಳವಣಿಗೆಯನ್ನು ಸೂಕ್ತ ದರ್ಶನಗಳೊಂದಿಗೆ ಸಾರ್ವಜನಿಕರಿಗೆ ತಲುಪುವ ಆಶಯದಲ್ಲಿ ಯಶಸ್ವಿಯಾಗಿವೆ.

ನವ್ಯ ಸಂಪ್ರದಾಯದ ಕವಿತೆಗಳನ್ನು ಬರೆಯುವುದರಲ್ಲಿ ಆಸಕ್ತರಾಗಿದ್ದ ಭಟ್ಟರು ರಚಿಸಿದ ಗೀತಕಾವ್ಯಗಳ ಸಂಖ್ಯೆ ಅಪಾರ. ಸ್ವಲ್ಪ ಕಾಲ ಸುಗಮ ಸಂಗೀತದ ಮಾಧುರ್ಯತೆ ಎಲ್ಲೋ ತನ್ನ ಇರುವಿಕೆಯನ್ನು ಕಡಿಮೆ ಮಾಡಿಕೊಂಡಿತೇನೋ ಎನ್ನುವ ಭಾವನೆ ಕಂಡಾಗ ’ಎನ್ನೆಸ್ಸೆಲ್’ ರ ಭಾವಗೀತೆಗಳು ಮರಳಿ ಜನರೆಲ್ಲರ ಬಾಯಿನಲ್ಲಿ ಗುನುಗುಟ್ಟುವಂತಾಯಿತು.
ಶಿವಮೊಗ್ಗ ಸುಬ್ಬಣ್ಣ, ಸಿ.ಅಶ್ವಥ್, ಮೈಸೂರು ಅನಂತಸ್ವಾಮಿ, ಎಚ್.ಕೆ. ನಾರಾಯಣ ಮೊದಲಾದವರು, ಅನೇಕ ಸುಗಮ ಸಂಗೀತ ಗಾಯಕರು, ಭಟ್ಟರ ಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿದ್ದಾರೆ. ಡಾ. ಲಕ್ಷ್ಮೀನಾರಾಯಣ ಭಟ್ಟರು, ದೀಪಿಕಾ, ಭಾವಸಂಗಮ, ನೀಲಾಂಜನ, ಬಾರೋ ವಸಂತ, ಕವಿತಾ, ಮಾಧುರಿ, ಮಂದಾರ, ಬಂದೆ ಬರತಾವ ಕಾಲ, ಅರುಣ ಗೀತೆ, ಊರ ಹೊರಗೆ, ಕವನ ಬಿಡುಗಡೆ, ಇದಲ್ಲ ತಕ್ಕ ಗಳಿಗೆ, ಅವತಾರ, ಹಿರಿಯರು, ಕೃತಜ್ಞತೆ, ಪ್ರೀತಿ, ಸವಾರಿ, ಸೀಮಂತಿನಿ, ಮಗನಿಗೊಂದು ಪತ್ರ, ಮೊದಲಾದ ಸಮರ್ಥ ಇಂತಹ ಹಲವಾರು ಧ್ವನಿ ಸುರಳಿಗಳನ್ನು ಹೊರತಂದು ಜನಸಾಮಾನ್ಯರ ಮನರಂಜನೆಯನ್ನು ಮಾಡಿದ್ದಾರೆ.

Please follow and like us:
error