ಕರವೇ ಕಾರ್ಯಕರ್ತರ ಬಂಧನಕ್ಕೆ ಆಗ್ರಹ ನಾಳೆ ರಾಜ್ಯಾದ್ಯಂತ ಓಪಿಡಿ ಬಂದ್ ! 

 ಬೆಂಗಳೂರು , ನ . 7 : ಕರವೇ ಕಾರ್ಯಕರ್ತರ ಬಂಧನಕ್ಕೆ ಆಗ್ರಹಿಸಿ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಕಿರಿಯ ವೈದ್ಯರ ಧರಣಿ 
ಮುಂದುವರಿದಿದೆ . ನಾಳೆ ( ನ . 8 ) ಯಿಂದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಮುಂದಾಗಿದ್ದು , ರಾಜ್ಯಾದ್ಯಂತ ಒಪಿಡಿ ಬಂದ್ ಮಾಡಿ ಹೋರಾಟಕ್ಕೆ ಕರೆ ನೀಡಿದ್ದಾರೆ . ವೈದ್ಯತೀಯ ವಿದ್ಯಾರ್ಥಿಗಳು ಹಾಗೂ ಕಿರಿಯ ವೈದ್ಯರ ಮೇಲೆ ಹಲ್ಲೆ ನಡೆಸಿದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಧರಣಿನಿರತರು ಆಗ್ರಹಿಸಿದ್ದಾರೆ . ನಾಳೆ ಬೆಳಗ್ಗೆ 6 ರಿಂದ ಶನಿವಾರ ಬೆಳಗ್ಗೆ 6 ಗಂಟೆವರೆಗೂ ರಾಜ್ಯಾದ್ಯಂತ ಎಲ್ಲ ಖಾಸಗಿ ಆಸ್ಪತ್ರೆಯ ಒಪಿಡಿ ಬಂದ್ ಮಾಡಿ ಧರಣಿ ನಡೆಸುವಂತೆ ಮನವಿ ಮಾಡಲಾಗಿದೆ . ವೈದ್ಯರ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಿ , ಕ್ರಮ ಕೈಗೊಳ್ಳದಿದ್ದಲ್ಲಿ ದೇಶದಾದ್ಯಂತ ಹೊರ ರೋಗಿ ಚಿಕಿತ್ಸೆಯನ್ನು ನಿಲ್ಲಿಸಿ , ವ್ಯಾಪಕ ಪ್ರತಿಭಟನೆಯನ್ನು ನಡೆಸಬೇಕಾಗುತ್ತದೆ ಎಂದು ರಾಜ್ಯ ಐಎಂಎ ಕಾರ್ಯದರ್ಶಿ ಡಾ . ಶ್ರೀನಿವಾಸ್ ಹೇಳಿದ್ದು , ರೋಗಿಗಳಿಗೆ ತುರ್ತು ಚಿಕಿತ್ಸೆ ಬೇಕಾದಲ್ಲಿ ಲಭ್ಯವಿರುತ್ತದೆ ಎಂದು ತಿಳಿಸಿದ್ದಾರೆ . ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಖಾಸಗಿ ಕ್ಲಿನಿಕ್ ವೈದ್ಯರು ಪಾಲ್ಗೊಂಡು ಬೆಂಬಲ ನೀಡಲಿದ್ದಾರೆ . ಅಲ್ಲದೆ , ರಾಜ್ಯದ ಎಲ್ಲ ಕ್ಲಿನಿಕ್‌ಗಳು , ಆಸ್ಪತ್ರೆಗಳು , ಸರಕಾರಿ ಮತ್ತು ಖಾಸಗಿ ವೈದ್ಯರು ಪ್ರತಿಭಟನೆಗೆ ಬೆಂಬಲಿಸಿ ಮುಷ್ಕರದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದರು . 

Please follow and like us:
error