ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ: ವಿವಿಧ ಕೋರ್ಸುಗಳ ಪ್ರವೇಶಾತಿ ಆರಂಭ

ಕಲಬುರಗಿ–ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 2020-21ನೇ ಶೈಕ್ಷಣಿಕ ವರ್ಷಕ್ಕೆ (ಜುಲೈ ಆವೃತ್ತಿಗೆ) ಈ ಕೆಳಕಂಡ ಕೋರ್ಸ್‍ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ ಎಂದು ಕಲಬುರಗಿ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ. ಸಂಗಮೇಶ ಹಿರೇಮಠ ಅವರು ತಿಳಿಸಿದ್ದಾರೆ.
ಆಸಕ್ತ ವಿದ್ಯಾರ್ಥಿಗಳು ಪ್ರಥಮ ಬಿ.ಎ., ಬಿ.ಕಾಂ., ಬಿ.ಎಲ್.ಐ.ಎಸ್ಸಿ. ಹಾಗೂ ಪ್ರಥಮ ಎಂ.ಎ., (ಕನ್ನಡ, ಇಂಗ್ಲೀಷ್, ಹಿಂದಿ, ಉರ್ದು, ಇತಿಹಾಸ, ಪ್ರಾಚೀನ ಇತಿಹಾಸ ಹಾಗೂ ಪುರಾತತ್ವ ಅಧ್ಯಯನ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಸಾರ್ವಜನಿಕ ಆಡಳಿತ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ) ಹಾಗೂ ಎಂ.ಕಾಂ., ಎಂ.ಎಲ್.ಐ.ಎಸ್ಸಿ. ಎಂ.ಎಸ್ಸಿ ವಿಷಯಗಳಿಗೆ ಪ್ರವೇಶ ಪಡೆಯಬಹುದಾಗಿದೆ. ಬಿ.ಪಿ.ಎಲ್. ಕಾರ್ಡ್‍ನ್ನು ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ. 25ರಷ್ಟು ವಿನಾಯಿತಿ ನೀಡಲಾಗಿದೆ. ವಿದ್ಯಾರ್ಥಿಗಳು ದಂಡರಹಿತವಾಗಿ ಪ್ರವೇಶ ಪಡೆಯಲು 2020ರ ಅಕ್ಟೋಬರ್ 10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 08472-265868, ಪ್ರಾದೇಶಿಕ ನಿರ್ದೇಶಕರ ಮೊಬೈಲ್ ಸಂಖ್ಯೆ 9916783555 ಹಾಗೂ www.ksoumysuru.ac.in ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.


Please follow and like us:
error