ಕರ್ನಾಟಕ ವೀರಶೈವ – ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಆದೇಶ

ಕನ್ನಡನೆಟ್ ನ್ಯೂಸ್ :ಕರ್ನಾಟಕ ವೀರಶೈವ – ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಆದೇಶ ಮಾಡಿದ್ದಾರೆ. ಈ ಕುರಿತ ಸಿಎಂ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ವೀರಶೈವ – ಲಿಂಗಾಯತ ಸಮಾಜದ ಜನಾಂಗದವರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು , ಇವರಲ್ಲಿ ಆರ್ಥಿಕ . ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದವರಿದ್ದಾರೆ . ಈ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ವೀರಶೈವ – ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದು ಆಗತ್ಯವಿರುವುದರಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಿಗಮವನ್ನು ಸ್ಥಾಪನೆ ಮಾಡಲು ಆದೇಶ ಹೊರಡಿಸಿದ್ದಾರೆ

Please follow and like us:
error