You are here
Home > ಈ ಕ್ಷಣದ ಸುದ್ದಿ > ಕಲಿಯುಗ ಕರ್ಣ ನಟ ಅಂಬರೀಷ್ ಇನ್ನಿಲ್ಲ

ಕಲಿಯುಗ ಕರ್ಣ ನಟ ಅಂಬರೀಷ್ ಇನ್ನಿಲ್ಲ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಕಲಿಯುಗ ಕರ್ಣ ಎಂದೇ ಖ್ಯಾತರಾಗಿದ್ದ ಅಂಬರೀಷ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜಯದೇವ ಆಸ್ಪತ್ರೆಗೆ ಸೇರಿಸಲಾಗಿತ್ತು . ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ತಮ್ಮೇ ಆದ ವ್ಯಕ್ತಿತ್ವವನ್ನು ಹೊಂದಿದ್ದ ಅಂಬರೀಷ್ ಕೊಡುಗೈ ದಾನಿ ಎಂದೇ ಖ್ಯಾತರಾಗಿದ್ದರು. ರಾಜಕೀಯದಲ್ಲೂ ಸಕ್ರೀಯರಾಗಿದ್ದ ಅಂಬರೀಷರು ಪತ್ನಿ, ಮಗ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ನಟನೆಯ ಮೂಲಕ ಅಭಿಮಾನಿಗಳ ಮನಗೆದ್ದಿದ್ದ ಅಂಬರೀಷ್ ಅಭಿಮಾನಿಗಳ ಮನಸ್ಸಲ್ಲಿ ಯಾವತ್ತೂ ಶಾಶ್ವತವಾಗಿರುತ್ತಾರೆ.

Top