ಕಲ್ಯಾಣ ಕರ್ನಾಟಕ ಉತ್ಸವ ಸಚಿವ ಬಿ.ಸಿ.ಪಾಟೀಲರಿಂದ ಧ್ವಜಾರೋಹಣ

ಕೊಪ್ಪಳ: ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ 73ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಪೋಲಿಸ್ , ಡಿಆರ್, ಎನ್ ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ , ಸೇವಾದಳದ ತುಕಡಿಗಳು ಭಾಗಿಯಾಗಿ ನಡೆಸಿಕೊಟ್ಟ ಪಥ ಸಂಚಲನ ಆಕರ್ಷಕವಾಗಿತ್ತು.

ಆಸನಗಳು ಖಾಲಿ ಖಾಲಿ..:
ಕೋವಿಡ್-19 ಹಿನ್ನೆಲೆಯಲ್ಲಿ ಇನ್ನೂ ಶಾಲಾ ಕಾಲೇಜುಗಳಿಗೆ ರಜೆ ಇರುವುದರಿಂದ ವಿದ್ಯಾರ್ಥಿಗಳು ಪಾಲ್ಗೊಂಡಿರಲಿಲ್ಲ. ಹಾಗಾಗಿ ಮೈದಾನದ ಸುತ್ತ ಮುತ್ತಲಿನ ಗ್ಯಾಲರಿ ಮತ್ತು ಮುಂಭಾಗದ ಆಸನಗಳು ಬಹುತೇಕ ಖಾಲಿ ಖಾಲಿಯಾಗಿದ್ದವು.

ಈ ವೇಳೆ ಶಾಸಕ ರಾಘವೇಂದ್ರ ಹಿಟ್ನಾಳ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಎಸ್ಪಿ ಜಿ.ಸಂಗೀತಾ ಸೇರಿದಂತೆ ಇತರ ಗಣ್ಯರು ಭಾಗಿಯಾಗಿದ್ದರು.

Please follow and like us:
error