You are here
Home > ಕರ್ನಾಟಕ > ಕಸಾಪ ಮಾಜಿ ಅಧ್ಯಕ್ಷ ಪುಂಡಲೀಕ ಹಾಲಂಬಿ ವಿಧಿವಶ.

ಕಸಾಪ ಮಾಜಿ ಅಧ್ಯಕ್ಷ ಪುಂಡಲೀಕ ಹಾಲಂಬಿ ವಿಧಿವಶ.

pundalikahalambiಅನಾರೋಗ್ಯದಿಂದ ಬಳಲುತ್ತಿದ್ದ ಹಾಲಂಬಿಯವರು ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 7.30ರ ವೇಳೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅವರು ಅಗಲಿದ್ದಾರೆ. ಕಿಡ್ನಿ ಸಮಸ್ಯೆಯಿಂದಾಗಿ ಬಳಲುತ್ತಿದ್ದ ಪುಂಡಲೀಕ ಹಾಲಂಬಿ ಅವರನ್ನು ಇತ್ತೀಚೆಗಷ್ಟೇ ಬಸವನಗುಡಿ ಬಳಿಯ ಶೇಖರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಭಾನುವಾರ ಹಾಲಂಬಿಯವರು ಕೊನೆಯುಸಿರೆಳೆದಿದ್ದಾರೆ.

Leave a Reply

Top