ಕೊಪ್ಪಳ : ಜುಲೈ26ಕ್ಕೆ ಬಿಜೆಪಿ ಒಂದು ವರ್ಷದ ಆಡಳಿತ ಪೂರೈಸಿದೆ ಈ ಒಂದು ವರ್ಷದಲ್ಲಿ ಎದುರಾದ ಸಂಕಷ್ಟ ಹಿಂದೆದೂ ಬಂದಿರಲಿಕ್ಕಿಲ್ಲ. ಕೊಪ್ಪಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ ನೀಡಿದ್ದಾರೆ

ಯಡಿಯೂರಪ್ಪ ಅಧಿಕಾರ ವಹಿಸಿಕೊಂಡಾಗ ಬರ ತಾಂಡವವಾಡುತ್ತಿತ್ತು. ಅಧಿಕಾರ ವಹಿಸಿಕೊಂಡ ಕೆಲ ದಿನದಲ್ಲೇ ಅತಿವೃಷ್ಠಿ ಉಂಟಾಯಿತು. ಸಿಎಂ ಒಬ್ಬರೇ ಮುಂದೆ ನಿಂತು ನೆರೆ ಹಾವಳಿ ಸಮಸ್ಯೆಯನ್ನು ಎದುರಿಸಿದರು. ಕೋವಿಡ್19 ಸಂದರ್ಭದಲ್ಲೂ ಸಿಎಂ ಸಮಪರ್ಕವಾಗಿ ಕೆಲಸ ಮಾಡಿದ್ದಾರೆ. ಸಿಎಂ ಮುಳ್ಳಿನ ಹಾಸಿಗೆಯನ್ನು ಸೂಕ್ಷ್ಮವಾಗಿ ನಿರ್ವಹಣೆ ಮಾಡಿದ್ರು. ಸಿಎಂ ಸಮರ್ಥ ನಾಯಕತ್ವದಿಂದ ಕೆಲಸ ಮಾಡ್ತಿದ್ದಾರೆ. ಆರೋಗ್ಯ ಇಲಾಖೆಯಲ್ಲಿನ ಅವ್ಯವಹಾರದ ಬಗ್ಗೆ ಕಾಂಗ್ರೆಸ್ ನಿಂದ ದೂರು ವಿಚಾರ
ಕಾಂಗ್ರೆಸ್ ನವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಐವರು ಸಚಿವರು ಮಾಹಿತಿ ನೀಡಿದ್ರೂ, ಲೆಕ್ಕ ಲೆಕ್ಕ ಲೆಕ್ಕ ಎನ್ನುತ್ತಿದ್ದಾರೆ. ಜನರಿಗೆ ತಪ್ಪು ಮಾಹಿತಿ ನೀಡಿ, ಬಿಜೆಪಿ ಮತ್ತು ಸರ್ಕಾರಕ್ಕೆ ಕಪ್ಪು ಚುಕ್ಕೆ ಇಡಲು ಮುಂದಾಗಿದ್ದಾರೆ .ಇದು ಆಗದ ಕೆಲಸ ಕೋವಿಡ್19 ಜಗತ್ತಿಗೆ ಹೊಸದು ಆರೋಗ್ಯ ಉಪಕರಣದ ಬೇಡಿಕೆ ಮತ್ತು ಸಪ್ಲೈಯಲ್ಲಿ ಅಸಮತೋಲನ ಉಂಟಾಯ್ತು. ಈ ಕಾರಣಕ್ಕೆ ಒಂದಷ್ಟು ಹಣ ಹೆಚ್ಚು ನೀಡಿ ಖರೀದಿ ಮಾಡಲಾಗಿದೆ ಎಂದ ಬಿ.ಸಿ.ಪಾಟೀಲ್