ಕಾನೂನು ವೃತ್ತಿ ತರಬೇತಿಗಾಗಿ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ


ಕೊಪ್ಪಳ, : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2020-21 ನೇ ಸಾಲಿಗೆ ಕಾನೂನು ವೃತ್ತಿಯಲ್ಲಿ (ವಕೀಲ ವೃತ್ತಿ) ತರಬೇತಿ ಪಡೆಯಲು ಇಚ್ಛೆಯುಳ್ಳ ಕೊಪ್ಪಳ ಜಿಲ್ಲೆಯ ಮತೀಯ ಅಲ್ಪಸಂಖ್ಯಾತರ ಕಾನೂನು ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
       ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧರು, ಜೈನರು, ಪಾರ್ಸಿ,ಸಿಖ್) ಕಾನೂನು ಪದವೀಧರರು ಅರ್ಜಿಯನ್ನು ಸಲ್ಲಿಸಬಹುದು. ಕಾನೂನು ಪದವಿ ಪರೀಕ್ಷೆಯಲ್ಲಿ ಪಾಸು ಮಾಡಿದ ಮತೀಯ ಅಲ್ಪ ಸಂಖ್ಯಾತರ ವರ್ಗಕ್ಕೆ ಸೇರಿದ ಅಭ್ಯರ್ಥಿಯಾಗಿರಬೇಕು ಹಾಗೂ ಅರ್ಜಿ ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಕ್ಕೆ 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯನ್ನು ಪಾಸು ಮಾಡಿರುವ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ. ಅಭ್ಯರ್ಥಿಗಳು ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೋಂದಾಯಿಸಿರಬೇಕು. ಸರ್ಕಾರಿ ಆದೇಶ ಸಂಖ್ಯೆ : ಸಕಇ 225 ಬಿಸಿಎ 2000, 30 ಫೆಬ್ರುವರಿ 2002 ರಲ್ಲಿ ವರ್ಗೀಕರಣ ಮಾಡಿರುವ ಪ್ರಕಾರ ಅಲ್ಪಸಂಖ್ಯಾತ ಅಭ್ಯರ್ಥಿಗಳಾಗಿರಬೇಕು, ಸರ್ಕಾರದ ಆದೇಶ ಸಂಖ್ಯೆ : ಸಕಇ 222 ಬಿಸಿಎ 04, 20 ಸೆಪ್ಟಂಬರ್ 2004 ರ ಆದೇಶದಲ್ಲಿ ಸರ್ಕಾರವು ನಿಗದಿಪಡಿಸಿರುವ ನಮೂನೆಗಳಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು, ಕುಟುಂಬದ ವಾರ್ಷಿಕ ಆದಾಯ  3,50,000/- ರೂ.ಗಳನ್ನು ಮೀರಿರಬಾರದು. ತರಬೇತಿಗೆ ಮೂರು ವಿದ್ಯಾರ್ಥಿಗಳನ್ನು ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು. ತರಬೇತಿ ಅವಧಿ 4 ವರ್ಷಗಳಾಗಿದ್ದು, ತರಬೇತಿ ಅವಧಿಯಲ್ಲಿ ತರಬೇತುದಾರರಿಗೆ ಮಾಹೆಯಾನ ರೂ.5000 ಗಳಂತೆ ತರಬೇತಿ ಭತ್ಯೆ ನೀಡಲಾಗುವುದು. ಅಭ್ಯರ್ಥಿಗಳ ವಯೋಮಿತಿ 30 ವರ್ಷ ಮೀರಿರಬಾರದು. ಆಯ್ಕೆಯಾದ ಅಭ್ಯರ್ಥಿ ಸುಳ್ಳು ಜಾತಿ, ಆದಾಯ ಪ್ರಮಾಣ ಪತ್ರ ನೀಡಿ ಆಯ್ಕೆಯಾಗಿರುವುದು ಕಂಡು ಬಂದಲ್ಲಿ ಶಿಕ್ಷೆಗೆ ಗುರಿಪಡಿಸಿ, ಸ್ಟೆöÊಫಂಡ್ ನೀಡಿರುವ ಒಟ್ಟು ಹಣದ ಜೊತೆಗೆ ಶೇ.10 ರಷ್ಟು ಬಡ್ಡಿ ಸೇರಿಸಿ ಭೂಕಂದಾಯ ಬಾಕಿ ರೂಪದಲ್ಲಿ ವಸೂಲಿ ಮಾಡಲಾಗುವುದು.
       ಆಯ್ಕೆಯಾದ ಅಭ್ಯರ್ಥಿಗಳನ್ನು ಸರ್ಕಾರಿ ವಕೀಲರು/ಸಾರ್ವಜನಿಕ ಅಭಿಯೋಜಕರು ಅಥವಾ ಕನಿಷ್ಠ 20 ವರ್ಷ ವಕೀಲ ವೃತ್ತಿ ಮಾಡಿರುವ ವಕೀಲರ ಬಳಿ ತರಬೇತಿ ಪಡೆಯಲು ನಿಯೋಜಿಸಲಾಗುವುದು. ತರಬೇತಿ ಪಡೆದ ಬಗ್ಗೆ ಪ್ರತಿ ತಿಂಗಳ ದಿನಚರಿಗಳನ್ನು ಕಛೇರಿಗೆ ಸಲ್ಲಿಸಬೇಕು. ತರಬೇತಿಯ ಅವಧಿ ಮಧ್ಯದಲ್ಲಿ ತರಬೇತಿ ಬಿಡುವಂತಿಲ್ಲ (ಖಾಯಂ ಸರ್ಕಾರಿ ನೌಕರಿಗೆ ಸೇರಿದ ಪ್ರಸಂಗ ಹೊರತುಪಡಿಸಿ) ಅವಧಿಯ ಮಧ್ಯ ಬಿಟ್ಟಲ್ಲಿ ಅವರುಗಳು ಶಿಷ್ಯವೇತನವನ್ನು ಸರ್ಕಾರಕ್ಕೆ ಮರು ಪಾವತಿಸಬೇಕು. ತಪ್ಪಿದಲ್ಲಿ ಕಂದಾಯದ ಬಾಕಿ ಎಂದು ಹಣ ವಸೂಲಿ ಮಾಡಲಾಗುವುದು. ಸದಸ್ಯ ಕಾರ್ಯದರ್ಶಿಯವರು ಸ್ವೀಕರಿಸಿದ ಅರ್ಜಿಗಳನ್ನು ಪರೀಶಿಲನೆ ಮಾಡಿ ಅಪೂರ್ಣ ಮಾಹಿತಿ ಹೊಂದಿರುವ ಹಾಗೂ ಕೇಳಿರುವ ಮಾಹಿತಿಯನ್ನು ಅರ್ಜಿ ಸಂಗಡ ಒದಗಿಸದ ಮತ್ತು ಅವಧಿ ಮೀರಿ ಬಂದ ಅರ್ಜಿಗಳನ್ನು ಯಾವುದೇ ಕಾರಣ ನೀಡದೆ ತಿರಸ್ಕರಿಸಲಾಗುವುದು.
       ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕಛೇರಿ ವೇಳೆಯಲ್ಲಿ ಉಚಿತವಾಗಿ ಪಡೆದು, ಪೂರ್ಣ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟಂಬರ್. 24 ರೊಳಗಾಗಿ ಜಿಲ್ಲಾ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಆಡಳಿತ ಭವನ, ಕೊಪ್ಪಳ ಇಲ್ಲಿಗೆ ಸಲ್ಲಿಸಬೇಕು ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Please follow and like us:
error