ಕಾರ್ಯಕ್ರಮವಾರು ತಂಡ ರಚಿಸಿ, ವ್ಯವಸ್ಥಿತ ಕಾರ್ಯನಿರ್ವಹಣೆಗೆ ಕ್ರಮ ವಹಿಸಿ: ರಘುನಂದನ್ ಮೂರ್ತಿ

ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ

ಕೊಪ್ಪಳ : ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳು ಯಶಸ್ವಿಯಾಗಲು, ಕಾರ್ಯಕ್ರಮವಾರು ತಂಡಗಳನ್ನು ರಚಿಸಿ, ಡೆಡ್‌ಲೈನ್ ನಿಗದಿಪಡಿಸಿ ಅಗತ್ಯ ಮಾಹಿತಿ ಸಂಗ್ರಹಿಸುವAತೆ ವ್ಯವಸ್ಥಿತ ಕಾರ್ಯನಿರ್ವಹಣೆಗೆ ಕ್ರಮ ವಹಿಸಿ ಎಂದು ಆರೋಗ್ಯಾಧಿಕಾರಿಗಳಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
 ಜಿಲ್ಲಾ ಪಂಚಾಯತನ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಇಂದು ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ, ರಾಷ್ಟಿçÃಯ ಬಾಲ ಸ್ವಾಸ್ಥö್ಯ ಕಾರ್ಯಕ್ರಮ, ರಾಷ್ಟಿçÃಯ ಕ್ಷಯರೋಗ ಮತ್ತು ಎಚ್.ಐ.ವಿ. ನಿರ್ಮೂಲನಾ ಸಮನ್ವಯ ಸಮಿತಿ ಸಭೆ, ರಾಷ್ಟಿçÃಯ ಕುಟುಂಬ ಕಲ್ಯಾಣ ಕಾರ್ಯಕ್ರಮ, ರಾಷ್ಟಿçÃಯ ಫ್ಲೋರೋಸಿಸ್ ಕಾರ್ಯಕ್ರಮ ಮತ್ತು ಜಿಲ್ಲಾ ಮಟ್ಟದ ಆಶಾ ಕುಂದುಕೊರತೆ ನಿವಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
 ರಾಷ್ಟಿçÃಯ ಬಾಲ ಸ್ವಾಸ್ಥö್ಯ ಕಾರ್ಯಕ್ರಮದಲ್ಲಿ ಗ್ರಾಮದ ಸಮುದಾಯ ಭವನ ಅಥವಾ ಶಾಲೆಗಳಲ್ಲಿ ಅಂಗನವಾಡಿ ಮಕ್ಕಳನ್ನು ಕರೆತಂದು ಅವರ ಎತ್ತರ, ತೂಕ ಸಹಿತ ಯಾವುದೇ ಅನಾರೋಗ್ಯದ ಲಕ್ಷಣ ಕಂಡುಬAದರೂ ಅದನ್ನು ನಿಗದಿತ ನಮೂನೆಯಲ್ಲಿ ದಾಖಲಿಸಬೇಕು. ಗಂಭೀರ ಆರೋಗ್ಯ ಸಮಸ್ಯೆಗಳು ಕಂಡುಬAದಲ್ಲಿ ಹೆಚ್ಚಿನ ಚಿಕಿತ್ಸೆಗೆ ಸಂಬAಧಿಸಿದ ಆಸ್ಪತ್ರೆಗೆ ಶಿಫಾರಸು ಮಾಡಬೇಕು. ಆಸ್ಪತ್ರೆಗಳಲ್ಲಿ ಮಗು ಹುಟ್ಟಿದಾಗಲೇ ಕಂಡುಬರುವ ಸಮಸ್ಯೆಗಳಾದ ಸೀಳುತುಟಿ, ಶ್ರವಣದೋಷ, ದೃಷ್ಟಿದೋಷ ಮುಂತಾದ ದೈಹಿಕ ತೊಂದರೆಗಳ ಬಗ್ಗೆಯೂ ಕಾರ್ಯಕ್ರಮದ ನಮೂನೆಯಲ್ಲಿ ದಾಖಲಿಸಬೇಕು. ಈ ಕುರಿತು ಎಲ್ಲಾ ಆಸ್ಪತ್ರೆಗಳಲ್ಲಿ ಪೋಸ್ಟರ್‌ಗಳನ್ನು ಅಂಟಿಸಬೇಕು ಎಂದು ಅವರು ಹೇಳಿದರು.
 ರಾಷ್ಟಿçÃಯ ಕ್ಷಯರೋಗ ಮತ್ತು ಎಚ್.ಐ.ವಿ. ನಿರ್ಮೂಲನೆ ಕಾರ್ಯಕ್ರಮದಲ್ಲಿ ಆಶಾ ಕಾರ್ಯರ್ತೆಯರು, ಆರೋಗ್ಯಾಧಿಕಾರಿಗಳು ಇನ್ನೂ ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ರೋಗಿಗಳ ಪತ್ತೆ, ಅವರ ಚಿಕಿತ್ಸೆ ಮತ್ತು ಗುಣಮುಖರಾದ ಬಗ್ಗೆ ಎಲ್ಲ ಮಾಹಿತಿಯನ್ನೂ ದಾಖಲಿಸಬೇಕು. ಕಾರ್ಯಕ್ರಮ ಅಧಿಕಾರಿಗಳ ಸೂಚನೆಯನ್ವಯ ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಕಾರ್ಯನಿರ್ವಹಿಸಬೇಕು ಎಂದು ಅವರು ಸೂಚನೆ ನೀಡಿದರು.
 ಕ್ಷಯರೋಗದಿಂದ ಅಪೌಷ್ಠಿಕತೆ ಉಂಟಾಗುವ ರೀತಿಯಲ್ಲಿಯೇ ಅಪೌಷ್ಠಿಕತೆಯಿಂದ ಕ್ಷಯರೋಗ ಬಾಧಿಸುವ ಸಾಧ್ಯತೆ ಹೆಚ್ಚು. ಎಚ್.ಐ.ವಿ ಸೋಂಕಿತರಲ್ಲಿ ಕ್ಷಯರೋಗ ಪತ್ತೆಯಾದಲ್ಲಿ ಅದು ಗಂಭೀರ ಪರಿಣಾಮವನ್ನು ಬೀರುತ್ತದೆ. ರೋಗದ ತೀವ್ರತೆಯಿಂದ ಸಾವು ಸಂಭವಿಸಬಹುದು. ಆದ್ದರಿಂದ ಎಚ್.ಐ.ವಿ. ಸೋಂಕಿತರು ನಿಯಮಿತ ಕ್ಷಯರೋಗ ಪತ್ತೆ ಪರೀಕ್ಷೆಗೆ ಒಳಪಡಬೇಕು. ಪೌಷ್ಠಿಕ ಆಹಾರ, ಅಗತ್ಯ ಚಿಕಿತ್ಸೆ, ಔಷಧೋಪಚಾರಗಳಿಂದ ಕ್ಷಯರೋಗದಿಂದ ಗುಣಮುಖರಾಗಬಹುದು ಎಂದು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.
 ರಾಷ್ಟಿçÃಯ ಫ್ಲೋರೋಸಿಸ್ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಫ್ಲೋರೈಡ್ ಅಂಶ ಹೆಚ್ಚಾಗಿ ಕಂಡುಬರುವ ಗ್ರಾಮಗಳಲ್ಲಿನ ನೀರಿನ ಮೂಲಗಳ ಮಾರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿ. ತಾಲ್ಲೂಕುವಾರು ಮಾಹಿತಿಯನ್ನು ನೀಡಿ. ಅಂಗನವಾಡಿಗಳಲ್ಲಿ ಮಕ್ಕಳು ಹೆಚ್ಚಿನ ಸಮಯ ಕಳೆಯುವುದರಿಂದ ಮಕ್ಕಳಿಗೆ ಕಡ್ಡಾಯವಾಗಿ ಆರ್.ಒ ಘಟಕಗಳ ಅಥವಾ ಯು.ವಿ ಘಟಕಗಳ ಶುದ್ಧೀಕರಿಸಿದ ನೀರನ್ನು ನೀಡಬೇಕು. ಗ್ರಾಮಗಳ ಬೋರ್‌ವೆಲ್ ನೀರನ್ನು ಪರೀಕ್ಷೆಗೆ ಒಳಪಡಿಸಬೇಕು. ಫ್ಲೋರೈಡ್‌ಯುಕ್ತ ನೀರಿನ ಸೇವನೆಯಿಂದ ಆಗುವ ದಂತಕ್ಷಯ, ಮೂಳೆಗಳ ದುರ್ಬಲತೆ ಕುರಿತು ಗ್ರಾಮೀಣರಲ್ಲಿ ತಿಳುವಳಿಕೆ ಮೂಡಿಸಿ ಗ್ರಾಮಗಳಲ್ಲಿ ಸ್ಥಾಪಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳಿಂದಲೇ ನೀರನ್ನು ಪಡೆಯುವಂತೆ ತಿಳಿಸಬೇಕು ಎಂದು ಅವರು ಹೇಳಿದರು.
 ಜಿಲ್ಲಾ ಮಟ್ಟದ ಆಶಾ ಕುಂದುಕೊರತೆ ನಿವಾರಣಾ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರು ತಳಮಟ್ಟದಲ್ಲಿ ಕಾರ್ಯನಿರ್ವಹಿಸಿ, ಸಮೀಕ್ಷೆ ನಡೆಸಿ ಅಗತ್ಯವಾದ ಮಾಹಿತಿಯನ್ನು ನೀಡುವ, ಮಾತೃವಂದನಾ, ಕೋವಿಡ್, ಕ್ಷಯರೋಗಿಗಳ ಪತ್ತೆ ಮುಂತಾದವುಗಳ ಬಗ್ಗೆ ಮೂಲ ಮಾಹಿತಿದಾರರಾಗಿ ಪ್ರಮುಖ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳಲ್ಲಿ ಅವರು ಸಂಗ್ರಹಿಸುವ ಮಾಹಿತಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಸಿಬ್ಬಂದಿ ಡಾಟಾ ಎಂಟ್ರಿ ಮಾಡಬೇಕು. ತಾಲ್ಲೂಕು ಆರೋಗ್ಯಾಧಿಕಾರಿಗಳು ಆಶಾ ಕಾರ್ಯಕರ್ತೆಯರ ಮಿತಿಗಳನ್ನು ಅರಿತು ಅವರಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಸೂಚನೆ ನೀಡಿದರು.
 ಜಿಲ್ಲೆಯಲ್ಲಿ ಸಹಕಾರ ಇಲಾಖೆಯಿಂದ ನೀಡಲಾಗುವ ರೂ.5 ಸಾವಿರಗಳ ಪ್ರೋತ್ಸಾಹಧನ ಜಿಲ್ಲೆಯ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ತಲುಪಿಲ್ಲ ಎಂಬ ದೂರು ಕೇಳಿಬಂದಿದ್ದು, ಈ ಕುರಿತು ಸಹಕಾರ ಇಲಾಖೆಯಿಂದ ಮಾಹಿತಿ ಪಡೆದು ಸಲ್ಲಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಮಾತನಾಡಿ, ಆರ್.ಬಿ.ಎಸ್.ಕೆ ಕಾರ್ಯಕ್ರಮದ ಯಶಸ್ವಿ ನಿರ್ವಹಣೆಗೆ ಜಿಲ್ಲೆಯಲ್ಲಿ ಒಟ್ಟು 11 ತಂಡಗಳು ಕಾರ್ಯನಿರ್ವಹಿಸುತ್ತಿವೆ. ಇದುವರೆಗೂ 82 ಸಾವಿರ ಮಕ್ಕಳ ಮಾಹಿತಿಯನ್ನು ಸಂಗ್ರಹಿಸಲಾಗಿದೆ ಎಂದು ವಿವಿಧ ಕಾರ್ಯಕ್ರಮಗಳ ಪ್ರಗತಿ ಕುರಿತು ಮಾಹಿತಿ ನೀಡಿದರು.
 ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವೀಂದ್ರನಾಥ ಎಚ್. ಮಾತನಾಡಿ, ರಾಷ್ಟಿçÃಯ ಕುಟುಂಬ ಕಲ್ಯಾಣ ಕಾರ್ಯಕ್ರಮದಲ್ಲಿ ಜನಸಂಖ್ಯಾ ನಿಯಂತ್ರಣ ವಿಧಾನಗಳ ಬಗ್ಗೆ ಹಾಗೂ ಕುಟುಂಬ ಕಲ್ಯಾಣ ವಿಧಾನಗಳಲ್ಲಿ ಒಂದಾದ ಶಸ್ತçಚಿಕಿತ್ಸೆ ವಿಧಾನ ವಿಫಲವಾದಲ್ಲಿ ಸರ್ಕಾರದಿಂದ ಸಿಗುವ ಪರಿಹಾರದ ಬಗ್ಗೆ ಮಾಹಿತಿ ನೀಡಿದರು. ಅದರೊಂದಿಗೆ ಗರ್ಭಧಾರಣೆ ಅಥವಾ ಪ್ರಸವಪೂರ್ವ ಲಿಂಗ ಪತ್ತೆ ಕಾನೂನು ಬಾಹಿರವಾಗಿದ್ದು, ಲಿಂಗ ಪತ್ತೆಗೆ ಪ್ರಯತ್ನಿಸಿದವರ ವಿರುದ್ಧ ದಂಡ ಸಹಿತ ಕಾರಾಗೃಹ ಶಿಕ್ಷೆ ವಿಧಿಸಲಾಗುತ್ತದೆ. ಅಲ್ಲದೆ, ಲಿಂಗ ಪತ್ತೆಯಿಂದ ಅಥವಾ ಲಿಂಗ ಆಯ್ಕೆಯಿಂದ ಸಮಾಜದಲ್ಲಿ ಲಿಂಗಾನುಪಾತದಲ್ಲಿ ಬಹುದೊಡ್ಡ ವ್ಯತ್ಯಾಸವಾಗಿ ಮುಂದಿನ ದಿನಗಳಲ್ಲಿ ವ್ಯತಿರಿಕ್ತ ಪರಿಣಾಮ ಉಂಟುಮಾಡಬಹುದು. 2011 ರ ಜನಗಣತಿಯಂತೆ ರಾಜ್ಯದಲ್ಲಿ 1 ಸಾವಿರ ಗಂಡು ಮಕ್ಕಳಿಗೆ 948 ಹೆಣ್ಣುಮಕ್ಕಳು ಇದ್ದಾರೆ. ಜಿಲ್ಲೆಯಲ್ಲಿ ಕೊಪ್ಪಳ ತಾಲ್ಲೂಕಿನಲ್ಲಿ 942, ಗಂಗಾವತಿಯಲ್ಲಿ 949 ಮತ್ತು ಯಲಬುರ್ಗಾದಲ್ಲಿ 896 ಹೆಣ್ಣುಮಕ್ಕಳು ಇದ್ದಾರೆ ಎಂದು ಮಾಹಿತಿ ನೀಡಿದರು.
 ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಜಂಬಯ್ಯ ಮಾತನಾಡಿ, ರಾಷ್ಟಿçÃಯ ಬಾಲ ಸ್ವಾಸ್ಥö್ಯ ಕಾರ್ಯಕ್ರಮ, ರಾಷ್ಟಿçÃಯ ಫ್ಲೋರೋಸಿಸ್ ಕಾರ್ಯಕ್ರಮದ ಕುರಿತು ವಿವಿಧ ಇಲಾಖೆಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು.
 ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಮಹೇಶ ಎಂ.ಜಿ. ಮಾತನಾಡಿ ಕ್ಷಯ ರೋಗ ಹಾಗೂ ಎಚ್.ಐ.ವಿ ರೋಗಗಳ ಪರೀಕ್ಷೆ, ಚಿಕಿತ್ಸೆ ಹಾಗೂ ನಿಯಂತ್ರಣ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.
 ಸಭೆಯಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ಬಸವರಾಜ ಕುಂಬಾರ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಕೃಷ್ಣಮೂರ್ತಿ ದೇಸಾಯಿ, ವಿವಿಧ ತಾಲ್ಲೂಕುಗಳ ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Please follow and like us:
error