ಕುಷ್ಟಗಿಯಲ್ಲಿ ಆಸ್ಪತ್ರೆಗೆ ಜಮೀನು ಹಸ್ತಾಂತರ : ವಸತಿ ಸಚಿವರ ಸಭೆ


ಕುಷ್ಟಗಿಯಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಗೃಹಮಂಡಳಿ ಜಮೀನು ಹಸ್ತಾಂತರಿಸುವ ಬಗ್ಗೆ ವಸತಿ ಸಚಿವರ ಸಭೆ

ಬೆಂಗಳೂರು : ಕೊಪ್ಪಳ ಜಿಲ್ಲೆ ಕುಷ್ಟಗಿ ಪಟ್ಟಣ ವ್ಯಾಪ್ತಿಯಲ್ಲಿ ಕರ್ನಾಟಕ ಗೃಹ ಮಂಡಳಿ ವಶದಲ್ಲಿರುವ 6 ಎಕರೆ 10 ಗುಂಟೆ ಜಮೀನಿನನ್ನು ನೂತನ ಆಸ್ಪತ್ರೆ ಕಟ್ಟಡ ನಿರ್ಮಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಸ್ತಾಂತರಿಸುವ ಪ್ರಸ್ತಾಪ ಕುರಿತಂತೆ ವಸತಿ ಸಚಿವ ವಿ.ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು. ವಸತಿ ಸಚಿವರ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕ ಅಮರೇಗೌಡ ಬಯ್ಯಾಪುರ ಅವರು ಪಾಲ್ಗೊಂಡು, ಕುಷ್ಟಗಿಯಲ್ಲಿ ಸುಸಜ್ಜಿತ ಆಸ್ಪತ್ರೆ ಕಟ್ಟಡ ನಿರ್ಮಾಣದ ಅವಶ್ಯಕತೆಯಿರುವುದರಿಂದ ಜಮೀನನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸಬೇಕೆಂದು ಕೋರಿದರು. ಕರ್ನಾಟಕ ಗೃಹ ಮಂಡಳಿ ಆಯುಕ್ತರು ಹಾಗೂ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ಈ ಸಂಬಂಧ ಚರ್ಚೆ ನಡೆಸಿದರು. ಸಭೆಯಲ್ಲಿ ಕರ್ನಾಟಕ ಗೃಹ ಮಂಡಳಿ ಆಯುಕ್ತ ಡಿ.ಎಸ.ಸುರೇಶ್, ಮುಖ್ಯ ಅಭಿಯಂತರ ನಂಜುಂಡಪ್ಪ, ಅಧೀಕ್ಷಕ ಅಭಿಯಂತರ ಹೋಸೂರ್ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

Please follow and like us:
error