ಕುಸ್ಮಾ ಪದಾಧಿಕಾರಿಗಳ ಪದಗ್ರಹಣ, ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಉಪನ್ಯಾಸ, ಸಂವಾದ ಕಾರ್ಯಕ್ರಮ ಅ. ೧೦ಕ್ಕೆ

Koppal ಕೊಪ್ಪಳ ಜಿಲ್ಲಾ ಅನುದಾನರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಕುಸ್ಮಾ ದ ನೂತನ ಪದಾಧಿಕಾರಿಗಳ ಪದಗ್ರಹಣ, ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಉಪನ್ಯಾಸ, ಸಂವಾದ ಕಾರ್ಯಕ್ರಮ ಅಕ್ಟೋಬರ್ ೧೦ ರಂದು ಪಾನಘಂಟಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ತೇಜಸ್ವಿ ಕಟ್ಟಿಮನಿಯವರೊಂದಿಗೆ ಸಂವಾದ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಿ ಎಂದು ಕುಸ್ಮಾ ಜಿಲ್ಲಾಧ್ಯಕ್ಷ ಜಗನ್ನಾಥ್ ಹೇಳಿದರು. ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದ ವಿವರ ನೀಡಿದರು. ಜಿಲ್ಲಾ ಗೌರವಾದ್ಯಕ್ಷ ರಾಘವೇಂದ್ರ ಪಾನಘಂಟಿ ಮಾತನಾಡಿ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಚರ್ಚೆಗಳಾಗಬೇಕಿದೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಶಾಹೀದ್ ಕವಲೂರ್, ಪ್ರದಾನ ಕಾರ್ಯದರ್ಶಿ ಪ್ರಹ್ಲಾದ ಅಗಳಿ ಉಪಸ್ಥಿತರಿದ್ದರು.

Please follow and like us:
error