ಕೆಪಿಸಿಸಿ ವಕ್ತಾರರಾಗಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ನೇಮಕ

ಬೆಂಗಳೂರು : ಹೈದ್ರಾಬಾದ್ ಕರ್ನಾಟಕದ ಜನಪ್ರಿಯ ನಾಯಕ ಇಕ್ಬಾಲ್ ಅನ್ಸಾರಿಯವರನ್ನು ಕೆಪಿಸಿಸಿ ವಕ್ತಾರರಾಗಿ ನೇಮಕ ಮಾಡಲಾಗಿದೆ. ಈ ಕುರಿತು ಆದೇಶ ಹೊರಡಿಸಿರುವ ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮ ಬಹುಮುಖ್ಯವಾದ ಪಾತ್ರವನ್ನು ವಹಿಸುವುದು ತಮಗೆಲ್ಲಾ ತಿಳಿದಿರುವ ವಿಷಯ . ಈ ಕಾರಣಕ್ಕಾಗಿ ಮಾಧ್ಯಮವನ್ನು ಪ್ರಜಾಪ್ರಭುತ್ವ ವ್ಯವಸ್ಥೆಯ 4 ನೇ ಸಂಭವೆಂದು ಪರಿಗಣಿಸಲಾಗಿದೆ . ಇತ್ತೀಚಿನ ದಿನಗಳಲ್ಲಿ ದೃಶ್ಯ ಮುದ್ರಣ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳು ಸಾರ್ವಜನಿಕವಾಗಿ ಮಹತ್ವದ ವಿಷಯಗಳ ಬಗ್ಗೆ ಚರ್ಚೆಯ ನೇತೃತ್ಯ ವಹಿಸುತ್ತಿರುವುದು ಗಮನಿಸಬೇಕಾದ ವಿಷಯ . ಈ ಮಾಧ್ಯಮಗಳಲ್ಲಿ ನಮ್ಮ ವಿಚಾರ ಮತ್ತು ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಾಗಿರುವುದು ಅತ್ಯಂತ ಅವಶ್ಯಕವಾಗಿದೆ . ಈ ಹಿನ್ನೆಲೆಯಲ್ಲಿ ತಮಗಿರುವ ಅನುಭವ , ತಿಳುವಳಿಕೆಗಳೊಂದಿಗೆ ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮರ್ಥ್ಯವನ್ನು ಗಮನಿಸಿ ನಿಮ್ಮನ್ನು ” ಕೆಪಿಸಿಸಿ ವಕ್ತಾರರಾಗಿ ನೇಮಕಮಾಡಲಾಗಿದೆ . ಈ ಜವಾಬ್ದಾರಿಯನ್ನು ತಾವು ವಹಿಸಿಕೊಂಡು ಕೆಪಿಸಿಸಿಯ ಸಂವಹನ ಮತ್ತು ಮಾಧ್ಯಮ ಮುಖ್ಯಸ್ಥರು ನೀಡುವ ಸಲಹೆ , ಸೂಚನೆ ಹಾಗೂ ಮಾರ್ಗದರ್ಶನಗಳ ಮೇಲೆ ತಕ್ಷಣವೇ ಕಾರ್ಯಪ್ರವೃತರಾಗಬೇಕಾಗಿ ಕೋರುತ್ತೇನೆ ನೇಮಕಾತಿ ಪತ್ರದಲ್ಲಿ ಹೇಳಿದ್ದಾರೆ‌.

Please follow and like us:
error