ಕೆರೆ ತುಂಬಿಸುವ ಯೋಜನೆಗೆ ಸರ್ಕಾರದಿಂದ ಅನುಮತಿ -ರಾಘವೇಂದ್ರ ಹಿಟ್ನಾಳ

ಜಿಲ್ಲಾಸ್ಪತ್ರೆ ಅವ್ಯವಸ್ಥೆ ಸರಿಪಡಿಸಲು ಕ್ರಮ
ಕನ್ನಡನೆಟ್ ಕೊಪ್ಪಳ : ೨೪*೭ ಕುಡಿಯುವ ನೀರು ಯೋಜನೆ ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಇಡೀ ಕ್ಷೇತ್ರ ನೀರಾವರಿಯಾಗಲಿದೆ

ಹಿರೆಹಳ್ಳದ ಮೂಲಕ 22.18 ಕೋಟಿ ರೂ. ವೆಚ್ಚದಲ್ಲಿ 14 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸರ್ಕಾರ ಅನುಮತಿ ನೀಡಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಪ್ಪಳದ ಗವಿಸಿದ್ಧೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ಈಗಾಗಲೇ ಹೀರೆಹಳ್ಳ ಹುಳೆತ್ತಲಾದೆ. ಈಗ ಮಳೆ ನೀರು ಹರಿದು ಹೋಗುತ್ತಿದೆ ಇದರಿಂದ ನೀರು ಪೋಲಾಗುವುದನ್ನು ತಡೆಗಟ್ಟಲು ಕೆರೆ ತುಂಬಿಸುವ ಯೋಜನೆಗೆ ಒತ್ತು ನೀಡಲಾಗಿದದ್ದು. ಸರ್ಕಾರ ಅನುಮತಿ ನೀಡಿದ್ದು ಮುಂದಿನ ದಿನಗಳಲ್ಲಿ ಕೊಪ್ಪಳ ತಾಲೂಕಿನ 14 ಗ್ರಾಮಗಳ ಕೆರೆಗಳನ್ನು ತುಂಬಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಕೊವಿಡ್ ಪ್ರಕರಣಗಳ ಹೆಚ್ಚಾಗುತ್ತಿದ್ದು, ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಮತ್ತು ಇತರ ವಿಷಯಗಳನ್ನು ಆರೋಗ್ಯ ಇಲಾಖೆ ಕಾರ್ಯದರ್ಶಿ ಜತೆ ಚರ್ಚಿಸಿದ್ದು ಸಕಾರಾತ್ಮವಾಗಿ ಸ್ಪಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಆಸ್ಪತ್ರೆಯಲ್ಲಿ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Please follow and like us:
error