ಕೊಪ್ಪಳ ಸಂಸದ ಸಂಗಣ್ಣ ಕರಡಿಯವರಿಗೆ ಕರೋನಾ ಸೋಂಕು ದೃಢ

ಕೊಪ್ಪಳ : ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರಿಗೆ ಕೋವಿಡ್19 ಸೋಂಕು ದೃಢವಾಗಿದೆ. ಟ್ವಿಟ್ ಮಾಡಿ, ಈ ಬಗ್ಗೆ ಮಾಹಿತಿ ಹಂಚಿಕೊಂಡಿರೋ ಸಂಸದರು. ತಮ್ಮನ್ನು ಭೇಟಿಯಾದ ಕಾರ್ಯಕರ್ತರಿಗೆ ರೋಗ ಲಕ್ಷಣ ಇದ್ದರೆ ಪರೀಕ್ಷೆಗೆ ಒಳಗಾಗಲು ಮನವಿ ಮಾಡಿದ್ದಾರೆ.

ನಿನ್ನೆಯಷ್ಟೇ ಸಂಸದರು ಕ್ಷೇತ್ರದ ವಿವಿಧ ಕಡೆ ಓಡಾಡಿದ್ದರು

KARADI SANGANNA @Sangannakaradi ನನ್ನ ಕರೋನ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು , ವೈದ್ಯರ ಸಲಹೆಯಂತೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ . ನನ್ನ ಭೇಟಿಯಾದ ಕಾರ್ಯಕರ್ತರು ಹಾಗೂ ಮುಖಂಡರು ಯಾರಿಗಾದರೂ ಕರೋನಾ ಲಕ್ಷಣ ಬಂದರೆ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಿ . ಕ್ಷೇತ್ರದ ಜನರ ತುರ್ತು ಕೆಲಸಗಳಿಗೆ ನನ್ನ ಆಪ್ತ ಸಹಾಯಕರನ್ನು ದೂರವಾಣಿ ಮೂಲಕ ಸಂಪರ್ಕಿಸಬಹುದು .

Please follow and like us:
error