ಬಯಲುಮಲವಿಸರ್ಜನೆ ಮುಕ್ತ ಗ್ರಾಮವನ್ನಾಗಿ ಮಾಡಲು ಸೂಚನೆ- ನಿರ್ವಾಹಕ ಅಧಿಕಾರಿಗಳಾದ ರಾಮಚಂದ್ರನ್

 
ಗಂಗಾವತಿ . ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ರಾಮಚಂದ್ರನ್ ಗಂಗಾವತಿ ತಾಲೂಕಿನ ಜೀರಾಳ ಗ್ರಾಮಕ್ಕೆ ಭೇಟಿ ನೀಡಿದರು. ಭೇಟಿಯ ಸಮಯದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಹಾಗು ಸಿಬ್ಬಂದಿಯೊಂದಿಗೆ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿದರು. ಪ್ರಗತಿಯ ಹಂತದಲ್ಲಿದ್ದ ಅಂಗನವಾಡಿ ಕೇಂದ್ರ ಹಾಗು ರಾಜೀವ್ ಗಾಂಧಿ ಸೇವಾ ಕೇಂದ್ರಗಳನ್ನು ಪರಿಶೀಲಿಸಿ ಮೆಚ್ಚ್ಚುಗೆ ವ್ಯಕ್ತಪಡಿಸಿ ಹಲವಾರು ಸೂಚನೆಗಳನ್ನು ನೀಡಿದರು. ಗ್ರಾಮದಲ್ಲಿ ಬಯಲು ಮಲ ವಿಸರ್ಜನೆಯ ಕೆಟ್ಟ ಪರಿಣಾಮಗಳನ್ನು ಎಲ್ಲರಿಗು ತಿಳಿಸಿದ ಅವರು ಗ್ರಾಮವನ್ನು ಬೇಗ ಬಯಲು ಮಲ ವಿಸರ್ಜನೆ ಮುಕ್ತ ಗ್ರಾಮವನ್ನಾಗಿ ಮಾಡಲು ತಿಳಿಸಿದರು.ನಂತರ ಅವರು ಬಾಪಿರೆಡ್ಡಿ ಕ್ಯಾಂಪಿನಲ್ಲಿ ಕೃಷಿ ಇಲಾಖೆಯವರು ನರೇಗಾ ಒಗ್ಗೂಡಿಸುವಿಕೆಯಲ್ಲಿ ನಿರ್ಮಿಸಿದ ಎರೆಹುಳು ಗೊಬ್ಬರ ಘಟಕವನ್ನು ವೀಕ್ಷಿಸಿದರು.ನಂತರ ಅವರು ಗಂಗಾವತಿಯ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಇತ್ತೀಚೆಗೆ ಗಂಗಾವತಿ ತಾಲೂಕಿನ ಸಿದ್ದೀಕೆರೆಯ ರಾಮ ಚಂದ್ರ ನಾಯಕ್ ಇವರು ಮುಂಜಾನೆ ಮಲ ವಿಸರ್ಜನೆಗೆ ಹೋದಾಗ ಎರಡು ಕರಡಿಗಳು ದಾಳಿ ನಡೆಸಿ ಗಾಯಗೊಳಿಸಿದ್ದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರಣ ಇವರ ಆರೋಗ್ಯ ಪರಿಸ್ಥಿತಿಯ ಬಗ್ಗೆ ವಿಚಾರಿಸಿದರು. ಇವರೊಡನೆ ಸಮಾಲೋಚಿಸಿದ ರಾಮಚಂದ್ರನ್ ರವರು ಬಯಲು ಮಲವಿಸರ್ಜನೆಗೆ ಹೋದರೆ ಆಗುವ ದುಷ್ಪರಿಣಾಮಗಳನ್ನು ವಿವರಿಸಿ ಶೌಚಾಲಯದ ಅಗತ್ಯತೆಯನ್ನು ಮನಮುಟ್ಟುವಂತೆ ತಿಳಿಸಿ ಶೌಚಾಲಯ ಕಟ್ಟಿಕೊಳ್ಳಲು ಅವರ ಮನ ಒಲಿಸಿದರು.ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಭೇಟಿಯ ಸಮಯದಲ್ಲಿ ಅವರ ಜೊತೆ ಉಪ ಕಾರ್ಯದರ್ಶಿ ನರೇಂದ್ರನಾಥ ತೊರವಿ, ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ ಹಾಗು ಕಾರ್ಯ ನಿರ್ವಾಹಕ ಅಧಿಕಾರಿ ಕೃಷ್ಣ ಮೂರ್ತಿ ಉಪಸ್ಥಿತರಿದ್ದರು.cceo
Please follow and like us:
error