ವಸತಿ ನಿಲಯಗಳಲ್ಲಿ ಶುಧ್ಧ ಹಾಗೂ ಗುಣಮಟ್ಟದ ಆಹಾರ ಒದಗಿಸಿ – ಜಿಲ್ಲಾಧಿಕಾರಿ ಎಂ. ಕನಗವಲ್ಲಿ.

ಕೊಪ್ಪಳ- ಜು-22 (ಕ ವಾ): ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಶುಧ್ಧ ಹಾಗೂ ಗುಣಮಟ್ಟದ ಆಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ವಸತಿ ನಿಲಯಗಳ ಪಾಲಕರು ಹಾಗೂ ಮೇಲ್ವಿಚಾರಕರಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಶುಕ್ರವಾರದಂದು ಹಮ್ಮಿಕೊಳ್ಳಲಾಗಿದ್ದ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ನಿಲಯ ಪಾಲಕರು ಹಾಗೂ ಮೇಲ್ವಿಚಾರಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. dcವಸತಿ ನಿಲಯದ ಆಹಾರ ಸಾಮಗ್ರಿಗಳು ಉತ್ತಮ ಗುಣಮಟ್ಟದ್ದಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಬಿಸಿಯಾಗಿರುವ ಆಹಾರವನ್ನು ಒದಗಿಸಬೇಕು. ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಬೇಕು. ಎಲ್ಲ ವಸತಿ ಶಾಲೆಗಳಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಶೇ. 100 ರಷ್ಟು ಬರುವಂತೆ ಈಗಿನಿಂದಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸೂಚನೆ ನೀಡಿದರು.

Please follow and like us:
error