fbpx

ಕೊರೊನ ತ್ಯಾಜ್ಯ ವಿಲೇವಾರಿ ಕಷ್ಟ; ಮನೆಯ ಮಾಸ್ಕ್ ಗಳನ್ನು ಬಳಸಿ- ಸಚಿವ ಸುಧಾಕರ್

ಕರ್ನಾಟಕದಲ್ಲಿ ದಿನಂಪ್ರತಿ 3000 ಕೆಜಿ ಯಷ್ಟು ಕೊರೊನ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ.ಮಾಸ್ಕ್ , ಪಿಪಿಇ ಕಿಟ್ ,ಕೈ ಗವುಸುಗಳು ಇದರ ಮೂಲ.ಈ ತ್ಯಾಜ್ಯದ ವಿಲೇವಾರಿ ವೈಜ್ಞಾನಿಕವಾಗಿ ಆಗಬೇಕು ಅದು ಕ್ಲಿಷ್ಟಕರ ಕೂಡಾ ,ಈ ತ್ಯಾಜ್ಯಕಡಿಮೆ ಮಾಡಲು ಸಾರ್ವಜನಿಕರು ಮನೆಯಲ್ಲೇ ತಯಾರಿಸಿದ ಮರು ಬಳಕೆಯ ಮಾಸ್ಕ್ ಬಳಕೆಯನ್ನು ರೂಡಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮನವಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು

ಕಳೆದ 10 ದಿನಗಳಲ್ಲಿ ಪ್ರತಿ 10 ಲಕ್ಷ ಜನಸಂಖ್ಯೆಗೆ ಅನುಗುಣವಾಗಿ ಕೋವಿಡ್ ಶಂಕಿತರನ್ನು ಪರೀಕ್ಷೆಗೆ ಒಳಪಡಿಸಿದ ಜಿಲ್ಲೆಗಳಲ್ಲಿ ಯಾದಗಿರಿ ಮೊದಲ ಸ್ಥಾನದಲ್ಲಿದೆ. ಈ ಜಿಲ್ಲೆಯಲ್ಲಿ ಪ್ರತಿ ಮಿಲಿಯನ್ ಜನಸಂಖ್ಯೆಯಲ್ಲಿ 7,297 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.ಪ್ರತಿ ಮಿಲಿಯನ್’ಗೆ 4,843 ಪರೀಕ್ಷೆ ಮಾಡುವ ಮೂಲಕ ಕಲಬುರ್ಗಿ 2ನೆ ಸ್ಥಾನದಲ್ಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ

Please follow and like us:
error
error: Content is protected !!