ಕೊರೋನಾ: ೯೩೮ ಫಲಿತಾಂಶ ನಿರೀಕ್ಷೆರಾಯಚೂರು,: ಜಿಲ್ಲೆಯ ದೇವದುರ್ಗ ತಾಲೂಕಿನಿಂದ ೩೭, ಲಿಂಗಸೂಗೂರು ತಾಲೂಕಿನಿಂದ ೫೪, ಮಾನ್ವಿ ತಾಲೂಕಿನಿಂದ ೬೧, ಸಿಂಧನೂರು ತಾಲೂಕಿನಿಂದ ೪೮ ಮತ್ತು ರಾಯಚೂರು ತಾಲೂಕಿನಿಂದ ೪೮ ಸೇರಿದಂತೆ ಜೂನ್ ೧೯ ರ ಶುಕ್ರವಾರ ೨೪೮ ಜನರ ಗಂಟಲಿನ ದ್ರವ ಮಾದರಿಯನ್ನು ಕೋವಿಡ್-೧೯ ಶಂಕೆ ಹಿನ್ನೆಲೆಯಲ್ಲಿ ವರದಿಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಒಟ್ಟಾರೆ ಜಿಲ್ಲೆಯಿಂದ ಇದೂವರೆಗೆ ೧೯,೩೯೨ ಜನರ ಗಂಟಲಿನ ದ್ರವ್ಯ ಮಾದರಿಯನ್ನು ಕೊರೋನಾ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅವುಗಳಲ್ಲಿ ೧೮,೦೩೪ ವರದಿಗಳು ನೆಗೆಟಿವ್ ಆಗಿವೆ. ಉಳಿದ ೯೩೮ ಸ್ಯಾಂಪಲ್‌ಗಳ ಫಲಿತಾಂಶ ಬರಬೇಕಿದೆ.
ಫಿವರ್ ಕ್ಲಿನಿಕ್‌ಗಳಲ್ಲಿಂದು ೪೮೦ ಜನರನ್ನು ಥರ್ಮಲ್ ಸ್ಕಿçÃನಿಂಗ್‌ಗೆ ಒಳಪಡಿಸಲಾಗಿದೆ. ಕೋವಿಡ್-೧೯ ದೃಢಪಟ್ಟು ಆಸ್ಪತ್ರೆಗೆ ದಾಖಲಿಸಲಾಗಿದ್ದವರ ಪೈಕಿ ಇಂದು ೬೨ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟಾರೆ ೧೯೯ ಜನರು ಬಿಡುಯಾದಂತಾಗಿದೆ.
ರಾಯಚೂರು ತಾಲೂಕಿನ ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ೭೪, ಸಿಂಧನೂರು ತಾಲೂಕು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ೩೦, ಮಾನವಿ ತಾಲೂಕು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ೩೪ ಹಾಗೂ ಲಿಂಗಸೂಗೂರು ತಾಲೂಕು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ೪೨ ಸೇರಿದಂತೆ ಒಟ್ಟು ೧೮೦ ಜನರು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ಇರಿಸಿ ನಿಗಾವಹಿಸಲಾಗಿದೆ. ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ತಿಳಿಸಿದ್ದಾರೆ.


Please follow and like us:
error