fbpx

ಕೋವಿಡ್ ಆಸ್ಪತ್ರೆಯಲ್ಲಿನ ವೈದ್ಯರ ನಿರ್ಲಕ್ಷ್ಯ ಸೋಂಕಿತ ಗರ್ಭಿಣಿಗೆ ಗರ್ಭಪಾತ !

ರಾಯಚೂರು : ರಾಯಚೂರು ಕೋವಿಡ್ ಆಸ್ಪತ್ರೆಯಲ್ಲಿನ ಸೋಂಕಿತ ಗರ್ಭಿಣಿಗೆ ಗರ್ಭಪಾತವಾಗಿದೆ.

ಓಪೆಕ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿದ್ದ 3 ತಿಂಗಳ ಗರ್ಭಿಣಿ ನಿನ್ನೆ ತೀವ್ರ ರಕ್ತಸ್ರಾವದಿಂದ ನರಳಾಡಿದ್ದಳು

ಮೊನ್ನೆ ರಾತ್ರಿಯಿಂದಲೇ ರಕ್ತಸ್ರಾವವಾಗುತ್ತಿದ್ದರು ವೈದ್ಯರು ನಿರ್ಲಕ್ಷ್ಯ ತೋರಿಸಿದ್ದರಿಂದ ಗರ್ಭಿಣಿಗೆ ಚಿಕಿತ್ಸೆ ನೀಡುವಂತೆ‌ ಕೊವಿಡ್ ವಾರ್ಡ್ ನ ರೋಗಿಗಳು ಪ್ರತಿಭಟನೆ ಮಾಡಿದ್ದರು ಆದರೂ ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ ದೋರಣೆ ಮುಂದುವರೆಸಿದ್ದರಿಂದ ಮಧ್ಯಾಹ್ನದ ಊಟ ಬಿಟ್ಟು ಪ್ರತಿಭಟನೆ ಮಾಡಿದ್ದರು.

ರೋಗಿಗಳ ಆಕ್ರೋಶಕ್ಕೆ ಮಣಿದು ಗರ್ಭಿಣಿಯನ್ನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ರಕ್ತಸ್ರಾವದಿಂದ ಗರ್ಭಪಾತವಾಗಿದೆ

ಸೋಂಕಿತ ಮಹಿಳೆ ಚೇತರಿಸಿಕೊಳ್ಳುತ್ತಿದ್ದು ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮಕೃಷ್ಣರಿಂದ ಮಾಹಿತಿ ನೀಡಿದ್ದಾರೆ. ವೈದ್ಯರ ಈ ನಿರ್ಲಕ್ಷ್ಯ ಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೂಕ್ತ ಸಮಯದಲ್ಲಿಯೇ ಸ್ಪಂದಿಸಿ ಚಿಕಿತ್ಸೆ ನೀಡಿದರೆ ಗರ್ಭಪಾತವನ್ನು ತಪ್ಪಿಸಬಹುದಿತ್ತು ಎನ್ನಲಾಗಿದೆ.

Please follow and like us:
error
error: Content is protected !!