ಕೋವಿಡ್ ಚಿಕಿತ್ಸೆ ಫಲಕಾರಿಯಾಗದೇ ಕವಿ ಡಾ ಸಿದ್ದಲಿಂಗಯ್ಯ ನಿಧನ

ಬೆಂಗಳೂರು : ಇಕ್ರಲಾ ಒದಿರ್ಲಾ ಈ ನನ್ಮಕ್ಳ… ಎನ್ನುತ್ತಾ ಶೋಷಿತ ವರ್ಗಕ್ಕೆ ಧ್ವನಿಯಾಗಿದ್ದ, ನಾಡಿನ ಸಾಕ್ಷಿಪ್ರಜ್ಞೆ ಡಾ.ಸಿದ್ಧಲಿಂಗಯ್ಯ ನಿಧನರಾಗಿದ್ದಾರೆ.

ಕೋವಿಡ್ ಸೋಂಕಿನಿಂದಾಗಿ ದಲಿತ ಕವಿ, ಸಾಹಿತಿ ಡಾ ಸಿದ್ದಲಿಂಗಯ್ಯ ಅವರು ಸಾವನ್ನಪ್ಪಿದ್ದಾರೆ. ಸೋಂಕಿಗೆ ತುತ್ತಾಗಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನಲೆ ಅವರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ನಿಮೋನಿಯಾ ತೀವ್ರಾಗಿದ್ದ ಹಿನ್ನಲೆ ಅವರು ಆರೋಗ್ಯ ಸ್ಥಿತಿ ಬಿಗಾಡಾಯಿಸಿದ್ದು, ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ಸಿದ್ಧಲಿಂಗಯ್ಯನವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಗಡಿ ತಾಲೂಕಿನ ‘ಮಂಚನಬೆಲೆ’ ಗ್ರಾಮದಲ್ಲಿ 1954 ರಲ್ಲಿ ಜನಿಸಿದರು.ತಂದೆ ದೇವಯ್ಯ, ತಾಯಿ ಶ್ರೀಮತಿ ವೆಂಕಮ್ಮ. ಮಲ್ಲೇಶ್ವರಂನ ಸರ್ಕಾರಿ ಪ್ರೌಢಶಾಲೆ ಇವರ ವಿದ್ಯಾಕೇಂದ್ರವಾಗಿತ್ತು. ಆ ವೇಳೆಗಾಗಲೇ ಕವಿತೆ ಬರೆವ ಅಭ್ಯಾಸ ಇವರಿಗಿತ್ತು. ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು.

ಕವನ ಸಂಕಲನಗಳು: ಹೊಲೆ ಮಾದಿಗರ ಹಾಡು, ಮೆರವಣಿಗೆ, ಸಾವಿರಾರು ನದಿಗಳು, ಕಪ್ಪು ಕಾಡಿನ ಹಾಡು, ಆಯ್ದಕವಿತೆಗಳು, ಅಲ್ಲೆಕುಂತವರೆ. ನನ್ನ ಜನಗಳು ಮತ್ತು ಇತರ ಕವಿತೆಗಳು, ಸಮಕಾಲೀನ ಕನ್ನಡ ಕವಿತೆ ಭಾಗ-3,4, (ಸಂಪಾದನೆ ಇತರರೊಂದಿಗೆ),

ವಿಮರ್ಶ ಕೃತಿಗಳು : ಹಕ್ಕಿ ನೋಟ, ರಸಗಳಿಗೆಗಳು, ಎಡಬಲ, ಉರಿಕಂಡಾಯ

ಲೇಖನಗಳ ಸಂಕಲನ : ಅವತಾರಗಳು, ಸದನದಲ್ಲಿ ಸಿದ್ದಲಿಂಗಯ್ಯ ಭಾಗ -1, ಸದನದಲ್ಲಿ ಸಿದ್ದಲಿಂಗಯ್ಯ ಭಾಗ -2, ಜನಸಂಸ್ಕೃತಿ,

ನಾಟಕಗಳು : ಏಕಲವ್ಯ, ನೆಲಸಮ, ಪಂಚಮ

ಆತ್ಮಕಥೆ : ಊರುಕೇರಿ- ಭಾಗ-1, ಊರುಕೇರಿ- ಭಾಗ-2

ಗೌರವ, ಪ್ರಶಸ್ತಿಗಳು

ಉತ್ತಮ ಚಲನಚಿತ್ರಗೀತ ರಚನೆಗಾಗಿ ಕರ್ನಾಟಕ ಸರ್ಕಾರ ಪ್ರಶಸ್ತಿ,

ರಾಜ್ಯೋತ್ಸವ ಪ್ರಶಸ್ತಿ -ಕರ್ನಾಟಕ ಸರ್ಕಾರ

ಡಾ.ಅಂಬೇಡ್ಕರ್ ಶತಮಾನೋತ್ಸವ ವಿಶೇಷ ಪ್ರಶಸ್ತಿ

ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ

ಜಾನಪದ ತಜ್ಞ ಪ್ರಶಸ್ತಿ

2 ಬಾರಿ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯ.

ಸಂದೇಶ್ ಪ್ರಶಸ್ತಿ

ಡಾ.ಅಂಬೇಡ್ಕರ್ ಪ್ರಶಸ್ತಿ

ಸತ್ಯಕಾಮ ಪ್ರತಿಷ್ಠಾನ ಪ್ರಶಸ್ತಿ

ಬಾಬುಜಗಜೀವನರಾಮ್ ಪ್ರಶಸ್ತಿ

ನಾಡೋಜ ಪ್ರಶಸ್ತಿ

ಪ್ರೆಸಿಡೆನ್ಸಿ ಇನ್ಷಿಟ್ಯೂಷನ್ ಪ್ರಶಸ್ತಿ

ಆಳ್ವಾಸ್ ನುಡಿಸಿರಿ ಪ್ರಶಸ್ತಿ

ಶ್ರವಣಬೆಳಗೊಳದಲ್ಲಿ ನಡೆದ 81ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು.

ನೃಪತುಂಗ ಪ್ರಶಸ್ತಿ

ಪಂಪ ಪ್ರಶಸ್ತಿ

-ಜನಶಕ್ತಿಮೀಡಿಯಾ

Please follow and like us:
error