ಕೋವಿಡ್ ವಾರಿಯರ್ ಅಜ್ಮತ್ ಸಾವಿಗೆ ಕಂಬನಿ ಮಿಡಿದ ಸಚಿವ ಶ್ರೀರಾಮುಲು

ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿ ಸರ್ಕಾರಿ ಅಂಬ್ಯುಲೆನ್ಸ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀ ಅಜ್ಮತ್ ಅವರು ಇಂದು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಜ್ಮತ್ ಅವರು ಕೋವಿಡ್ ವಿರುದ್ಧದ ಸಮರದಲ್ಲಿ ಮುಂಚೂಣಿ ಹೋರಾಟಗಾರರಾಗಿ ಸತತವಾಗಿ ಕಾರ್ಯ ನಿರ್ವಹಿಸಿದ್ದರು.

ಇಂತಹ ನಿಸ್ವಾರ್ಥ ಸೇನಾನಿಗಳು ತಮ್ಮ ಜೀವದ ಹಂಗು ತೊರೆದು, ಅವಿರತವಾಗಿ ಕರ್ತವ್ಯ ನಿರ್ವಹಿಸುತ್ತಿರುವುದರಿಂದಲೇ ಸಾವಿರಾರು ರೋಗಿಗಳ ಜೀವ ಉಳಿಯುತ್ತಿವೆ.

ಅವರ ಆತ್ಮಕ್ಕೆ ಶಾಂತಿ ಸಿಗಲಿ, ದೇವರು ಅವರ ಕುಟುಂಬಕ್ಕೆ ದುಃಖ‌ತಡೆಯುವ ಶಕ್ತಿ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ

ಅವರ ಕುಟುಂಬಕ್ಕೆ ಸರ್ಕಾರದಿಂದ ದೊರೆಯಬೇಕಾದ ಎಲ್ಲ ಸವಲತ್ತುಗಳು ಹಾಗೂ ಪರಿಹಾರಗಳನ್ನು ಶೀಘ್ರವಾಗಿ ತಲುಪಿಸಲಾಗುವುದು ಎಂದು ಹೇಳಿದ್ದಾರೆ

SALUTECOVIDWARRIORS

Please follow and like us:
error