ಖ್ಯಾತ ಸಾಮಾಜಿಕ ಕಾರ್ಯಕರ್ತ, ವಾಗ್ಮಿ ಮಹೇಂದ್ರ ಕುಮಾರ್ ನಿಧನ -ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ ಸಂತಾಪ

ಬೆಂಗಳೂರು : ಖ್ಯಾತ ಸಾಮಾಜಿಕ ಕಾರ್ಯಕರ್ತ, ವಾಗ್ಮಿ ಮಹೇಂದ್ರ ಕುಮಾರ್ (47) ಶನಿವಾರ ಬೆಳಗಿನ ಜಾವ ಹೃದಯಾಘಾತದಿಂದ  ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬಜರಂಗದಳದ ರಾಜ್ಯ ಸಂಚಾಲಕರಾಗಿದ್ದ ಅವರು ಅದರಿಂದ ಹೊರಬಂದ ಬಳಿಕ ಸಂಘ ಪರಿವಾರದ ಕಟು ಟೀಕಾಕಾರರಾಗಿ ಸಾಮಾಜಿಕ, ಜಾಗೃತಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದರು.

ಮೂಲತ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾದ ಅವರು ಈಗ ಬೆಂಗಳೂರು ನಿವಾಸಿಯಾಗಿದ್ದರು.

ನಮ್ಮ ಧ್ವನಿ ಎಂಬ ಯೂಟ್ಯೂಬ್ ಚಾನೆಲ್ ಮೂಲಕ ವಿವಿಧ ವಿಷಯಗಳ ಬಗ್ಗೆ ಮಾತನಾಡಿ ಜನಪ್ರಿಯರಾಗಿದ್ದ ಅವರು ಕೇಂದ್ರ ಸರಕಾರದ ಸಿಎಎ ಕಾಯ್ದೆ ವಿರುದ್ಧವೂ ಹಲವು ಪ್ರತಿಭಟನಾ ಸಮಾವೇಶಗಳಲ್ಲಿ ಮಾತನಾಡಿದ್ದರು.

 

ಸಾಮಾಜಿಕ ಕಾರ್ಯಕರ್ತ, ಪ್ರಗತಿಪರ ಚಿಂತಕ, ವಾಗ್ಮಿ ಮಹೇಂದ್ರ ಕುಮಾರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್ ಅವರ ಅಗಲಿಕೆ ನೋವು ತಂದಿದೆ. ಬಜರಂಗದಳದ ಮಾಜಿ ಸಂಚಾಲಕರಾಗಿದ್ದ ಮಹೇಂದ್ರ ಕುಮಾರ್ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು ಹಾಗೂ ಹಿತೈಷಿಗಳಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

Please follow and like us:
error