ಗವಿಮಠ ಕೋವಿಡ್-19 ಆಸ್ಪತ್ರೆಗೆ ಸಚಿವ ಬಿ.ಸಿ.ಪಾಟೀಲ್ ಭೇಟಿ : ಶ್ರೀಗಳ ಸೇವೆಗೆ ಶ್ಲಾಘನೆ


ಕೊಪ್ಪಳ, : ಶ್ರೀ ಗವಿಮಠ ಕೋವಿಡ್ ಆಸ್ಪತ್ರೆಗೆ ರಾಜ್ಯ ಕೃಷಿ ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಇಂದು (ಮೇ 15) ಭೇಟಿ ನೀಡಿ, ಶ್ರೀಗಳ ಸೇವೆಯನ್ನು ಶ್ಲಾಘಿಸಿದರು.

ಜಿಲ್ಲೆಯ ಕೊರೋನಾ ಸೋಂಕಿತರಿಗೆ ಚಿಕಿತ್ಸೆಗೆ ನೆರವಾಗಲು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶ್ರೀ ಗವಿಸಿದ್ಧೇಶ್ವರ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಇವರ ಸಹಯೋಗದಲ್ಲಿ ಶ್ರೀ ಗವಿಮಠದ ಯಾತ್ರಿ ನಿವಾಸದಲ್ಲಿ ನಿರ್ಮಾಣಗೊಂಡ 100 ಆಕ್ಸಿಜನ್ ಬೆಡ್‌ಗಳ ಗವಿಮಠ ಕೋವಿಡ್ ಆಸ್ಪತ್ರೆಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಶನಿವಾರ ವೀಕ್ಷಣೆ ಮಾಡಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ನಂತರ ಅಲ್ಲಿಂದ ಗವಿಮಠಕ್ಕೆ ತೆರಳಿ ಸ್ವಾಮೀಜಿಗಳೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು, ಜಿಲ್ಲಾ ಕ್ಷಯ ನಿರ್ಮೂಲನಾ ಅಧಿಕಾರಿ ಡಾ.ಮಹೇಶ್ ಎಂ.ಜಿ. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Please follow and like us:
error