ಗವಿಮಠ ಜಾತ್ರೆ ಕುರಿತು ಗವಿಮಠಶ್ರೀ ಜಾತ್ರಾ ಸಂದೇಶ

ಶ್ರೀ ಗವಿಸಿದ್ದೇಶ್ವರ ಮಹಾ ರಥೋತ್ಸವದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಗೂ ಸ್ಥಳೀಯ ಚಾನಲ್‌ಗಳಲ್ಲಿ ಪ್ರಸಾರ ಮಾಡಲಾಗುವದು . ಭಕ್ತರು ಶ್ರೀಮಠದ ಆವರಣಕ್ಕೆ ಬರದೆ ತಾವಿರುವ ಸ್ಥಳದಲ್ಲಿಯೇ ರಥ ದರ್ಶನ ಮಾಡಿಕೊಳ್ಳಬೇಕೆಂದು ಕೇಳಿಕೊಳ್ಳುತ್ತವೆ .

ಕೊಪ್ಪಳ : ಜಾತ್ರೆಯ ಕುರಿತು ಗವಿಶ್ರೀಗಳು ಹೇಳಿರುವುದೆನು? ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ -2021 ನಾಡಿನ ಭಕ್ತಗಣಕ್ಕೆ ಶ್ರೀ ಗವಿಸಿದ್ಧೇಶನ ಜಾತ್ರೆಯ ಬಗ್ಗೆ ಅತ್ಯಂತ ಕುತೂಹಲ : ಜಾತ್ರೆ ಹೇಗೆ ನಡೆಯುತ್ತದೆ ? ಅಜ್ಜವರ ನಿರ್ಣಯವನು ? ಜಾತ್ರೆ ನಡೆಯುವುದೊ ಇಲ್ಲವೊ ? ಹೀಗೆ ಹತ್ತು ಹಲವು ಸಂಗತಿಗಳು . ಜಾತ್ರೆ ನಡೆಸುತ್ತೇನೆ ಎನ್ನಲು , ಜಾತ್ರೆ ನಡೆಸುವುದಿಲ್ಲವೆನ್ನಲು ನಾನಾರು ? ಒಂದೆಡೆ ದೈವಿಶಕ್ತಿ ಇನ್ನೊಂದೆಡೆ ಭಕ್ತರ ಭಕ್ತಿಯ ಶಕ್ತಿ . ಈ ಎರಡೂ ದಿವ್ಯ ಶಕ್ತಿಯು ಸಂಗಮವನ್ನು ನಾನು ಕೂಡಿಸುವನೆಂದಾಗಲಿ ಅಥವಾ ಎಲ್ಲಿಸುವೆವೆಂದಾಗಲಿ ಹೇಳಿದರೆ ಅಹಂಕಾರದ ಮಾತಾದೀತು . ಬಸವಣ್ಣನವರು ಹೇಳುವಂತೆ “ ಆನು ದೇವಾ ಹೊರಗಣವನು ಕೂಡಲ ಸಂಗಮದೇವಾ , ನಿಮ್ಮ ನಾಮವಿಡಿದ ಅನಾಮಿಕ ನಾನು ” ಇಂದು ದೈವೇಚ್ಛೇ ಭಕ್ತರ ನಿರೀಕ್ಷೆ ಇವರೆಡರೆ ಪರೀಕ್ಷೆಯ ಸಂಧಿಕಾಲ . ಜಾತ್ರೆಯನ್ನೂ ನಡೆಸಬೇಕು , ಸರ್ಕಾರದ ಆದೇಶವನ್ನೂ ಪಾಲಿಸಬೇಕು . ಕಾನೂನನ್ನು ಮೀರಿರಬಾರದು , ಸಂಪ್ರದಾಯವನ್ನು ಮುರಿದಿರಬಾರದು . ಪರಿಸರ ಸ್ನೇಹಿ ಜಾತ್ರೆಯ ಜೊತೆಗೆ , ಪರಿಸ್ಥಿತಿ ಸ್ನೇಹಿ ಜಾತ್ರೆಯನ್ನು ಮಾಡುವ ಮಧ್ಯಮ ಮಾರ್ಗವನ್ನು ಅನುಸರಿಸಬೇಕಾಗಿದೆ . ಸರ್ಕಾರವಾಗಲಿ , ಜಿಲ್ಲಾಡಳಿತವಾಗಲಿ ತೆಗೆದುಕೊಳ್ಳುವ ನಿರ್ಧಾರಗಳು , ನಮ್ಮ ಒಳಿತಿಗಾಗಿ ಎನ್ನುವ ಉನ್ನತ ಭಾವದೊಂದಿಗೆ ಈ ವರ್ಷದ ಜಾತ್ರೆ ಸರಳ ಮತ್ತು ವೈಶಿಷ್ಟ್ಯರ್ಪೂಣ್ರ ವಾಗಿ ಧಾರ್ಮಿಕ ವಿಧಿವಿಧಾನಗಳಿಗೆ ಮಾತ್ರ ಸೀಮಿತಗೊಳಿರ್ಸೋಣ . ಇಷ್ಟು ವರ್ಷ ಮಠದ ಅಂಗಳದಲ್ಲಿ ಗವಿಸಿದ್ದೇಶ್ವರನ ರಥ ಎಳೆಯುತ್ತಿತ್ತು . ಭಕ್ತರು ಅದನ್ನು ನೋಡಲು ಬರುತ್ತಿದ್ದರು . ಈ ವರ್ಷ ನಿಮ್ಮ ಹೃದಯಂಗಳದಲ್ಲಿ ಆತನ ದಿವ್ಯ ಸ್ಮರಣೆಯ ರಥ ಎಳೆಯಲಿ ಅದನ್ನು ನೋಡಲು ಗವಿಸಿದ್ದೇಶ್ವರನೇ ನಿಮ್ಮ ಮನೆಗೆ ಬರುತ್ತಾನೆಂದು ನನ್ನ ಭಾವನೆ .

ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ

ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ – 2021 ಶತಮಾನಗಳಿಂದ ನಡೆದುಕೊಂಡು ಬಂದ ಶ್ರೀ ಗವಿಸಿದ್ದೇಶ್ವರ ಜಾತ್ರೆಯನ್ನು ಕೋವಿಡ್ -19 ಇರುವದರಿಂದ ಸರ್ಕಾರದ ಆದೇಶ ಮೀರದಂತೆ , ಸಂಪ್ರದಾಯ ಮುರಿಯದಂತೆ ಸರಳವಾಗಿ ಆಚರಿಸಲು ನಿಶ್ಚಯಿಸಿ ಶ್ರೀಮಠದ ಧಾರ್ಮಿಕ ವಿಧಿ ವಿಧಾನಗಳನ್ನು ಆಚರಿಸಿ , ಉಳಿದ ಕಾರ್ಯಕ್ರಮಗಳನ್ನು ಮಾಡದಿರಲು ನಿಶ್ಚಯಿಸಲಾಗಿದೆ . ಶ್ರೀ ಗವಿಮಠದ ಸದ್ಭಕ್ತರು . ಜಿಲ್ಲಾಡಳಿತ ಜನಪ್ರತಿನಿಧಿಗಳು ಚರ್ಚಿಸಿ ಈ ಕೆಳಗಿನ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ . 1. ಪ್ರತಿ ವರ್ಷ ಜಾತ್ರೆಯ ಅಂಗವಾಗಿ ಸಾಮಾಜಿಕ ಕಳಕಳಿಯಡಿ ನಡೆಯುವ ವಿದ್ಯಾರ್ಥಿ ಜಾಥಾ ಇರುವದಿಲ್ಲ 2. ಗುಡ್ಡದಲ್ಲಿ ಹಾಗೂ ಕೆರೆಯ ದಡದಲ್ಲಿ ಬಹಳ ಜನ ಒಂದೆ ಕಡೆ ಸೇರುವುದರಿಂದ ತೆಪ್ಪೋತ್ಸವ ಕಾರ್ಯಕ್ರಮವೂ ಸಹ ಇರುವುದಿಲ್ಲ , 3 , ದಿನಾಂಕ 30 ಶನಿವಾರ ಜರುಗುವ ಮಹಾರಥೋತ್ಸವ ಪ್ರತಿ ವರ್ಷದಂತೆ ಲಕ್ಷಾಂತರ ಭಕ್ತ ಜನರ ಮಧ್ಯದಲ್ಲಿ ಜರುಗುವದಿಲ್ಲ . ಜಾತ್ರಾ ಮೈದಾನದಲ್ಲಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ , ಪುರಿ ಜಗನ್ನಾಥ ರಥೋತ್ಸವ , ಮೈಸೂರ ದಸರಾ ಜಂಬೂಸವಾರಿ ರೀತಿಯಲ್ಲಿ ಕೇವಲ ಸಾಂಪ್ರದಾಯಿಕವಾಗಿ ರಥೋತ್ಸವವನ್ನು ಸರಳವಾಗಿ ಆಚರಿಸಲಾಗುವುದು . 4 , ಕೈಲಾಸ ಮಂಟಪದ ವೇದಿಕೆಯಲ್ಲಿ ಜರುಗುವ ಧಾರ್ಮಿಕ ಗೋಷ್ಠಿ , ಭಕ್ತ ಹಿತ ಚಿಂತನಾ ಸಭೆ , ಅನುಭಾವಿಗಳ ಅಮೃತಗೋಷ್ಠಿ , ಸಂಗೀತ , ಸಾಹಿತ್ಯ , ಹಾಸ್ಯ , ಸಾಧಕರ ಸನ್ಮಾನ ಈ ಯಾವ ಕಾರ್ಯಕ್ರಮಗಳೂ ನಡೆಯುವದಿಲ್ಲ , 5 , ದಿನಾಂಕ 31 ರವಿವಾರದಂದು ಶರಣರ ದೀರ್ಘದಂಡ ನಮಸ್ಕಾರ ಇರುತ್ತದೆ , ಆದರೆ ಭಕ್ತರಿಗೆ ದೀರ್ಘದಂಡ ನಮಸ್ಕಾರ ಹಾಕಲು ಅನುಮತಿ ಇರುವುದಿಲ್ಲ ಅವರ ಹಿಂದೆ ದೀರ್ಘದಂಡ ನಮಸ್ಕಾರ ಹಾಕದಂತೆ ಭಕ್ತರಲ್ಲಿ ಕೇಳಿಕೊಳ್ಳುತ್ತೇವೆ . ಶರಣರು ಧೀರ್ಘದಂಡ ನಮಸ್ಕಾರ ಪಾಕುವ ದಿನ ಹೊರತು ಪಡಿಸಿ ತಮಗೆ ಅನುಕೂಲವಾದ ಸಮಯ ಅಥವ ದಿನದಂದು ತಮ್ಮ ಹರಕೆ ಅಥವಾ ಸಂಕಲ್ಪಗಳನ್ನು ಪೂರೈಸಿಸಬಹುದು . 6 , ದಿನಾಂಕ 31 ರಂದು ಸಿದ್ದೇಶ್ವರ ಮೂರ್ತಿಯ ಮೆರವಣಿಗೆ ನಂತರ ನಡೆಯುವ ಮದ್ದು ಸುಡುವ ಕಾರ್ಯಕ್ರಮ ನಡೆಯುವದಿಲ್ಲ . 7. ಪ್ರತಿ ವರ್ಷದಂತೆ 15-20 ದಿವಸ ನಡೆಯುವ ಮಹಾದಾಸೋಹ ಶ್ರೀಮಠಕ್ಕೆ ಬರುವ ಭಕ್ತಾಧಿಗಳಿಗೆ ಅನಾನುಕೂಲವಾಗದಿರಲೆಂದು ಈ ವರ್ಷ ಕೇವಲ ಜನೇವರಿ 30.31 ಮತ್ತು ಫೆಬ್ರುವರಿ 1 ರವರೆಗೆ ಸೀಮಿತಗೊಳಿಸಲಾಗಿದೆ . ಭಕ್ತರು ಯಾರು ರೊಟ್ಟಿಗಳನ್ನು ಹಾಗೂ ಸಿಹಿ ಪದಾರ್ಥಗಳನ್ನು ತರಬಾರದು , ಅವುಗಳನ್ನು ಮಹಾದಾಸೋಹದಲ್ಲಿ ಸ್ವೀಕರಿಸುವದಿಲ್ಲ . 8 , ದಾಸೋಹದಲ್ಲಿ ಕೇವಲ ದವಸ – ದಾನ್ಯ , ಕಾಯಿಪಲ್ಲೆಯನ್ನು ಮಾತ್ರ ಸ್ವೀಕರಿಲಾಗುವುದು ,

9 , ಜಾತ್ರಾ ಮಹೋತ್ಸವದಲ್ಲಿ ಅಂಗಡಿಗಳನ್ನು , ಆಮ್ಯುಜ್‌ಮೆಂಟ್ ಪಾರ್ಕಿ , ಮಿಠಾಯಿ , ಹೋಟಲ್ , ಸ್ಟೇಷನರಿ ಅಂಗಡಿಗಳನ್ನಗೊಂಡಂತೆ ಸಂಪೂರ್ಣವಾಗಿ ಆವರಣದಲ್ಲಿ ಜಾತ್ರಾ ಅಂಗಡಿಗಳು ಇರುವದಿಲ್ಲ .

10 , ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀಮಠದ ಆವರಣದಲ್ಲಿ ಪಾನಿಪುರಿ , ಗೋಜಿ , ಕಥೆ , ಕಬ್ಬಿನಹಾಲು ಐಸ್ ಕ್ರೀಮ್ , ಇತರೆ ತಿನಿಸಿನ ಮಾರಾಟದ ಅಂಗಡಿಗಳನ್ನು ನಿಷೇಧಿಸಿದೆ ,

11 , ಕೃಷಿ ವಸ್ತು ಪ್ರದರ್ಶನ , ಫಲಪುಷ್ಪ ಪ್ರದರ್ಶನ , ಕ್ರೀಡಾ ಕೂಟ , ನಾಟಕ , ವಿವಿಧ ಸಾಂಸ್ಕೃತಿಕ , ಮತ್ತು ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಿದೆ ,

12 , ಪ್ರತಿ ವರ್ಷದಂತೆ ಶ್ರೀ ಗವಿಸಿದ್ಧೇಶ್ವರ ಆಯುರ್ವೇದಿಕ ಆಸ್ಪತ್ರೆಯಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಜರುಗುವ ರಕ್ತದಾನ ಶಿಬಿರವನ್ನು ನಡೆಸಲಾಗುತ್ತದೆ .

13 , ಪ್ರತಿ ವರ್ಷ ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುತಿತ್ತು ಆದರೆ ಈ ವರ್ಷ ರಥೋತ್ಸವಕ್ಕೆ ಬರುವ ಭಕ್ತರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುವದಿಲ್ಲ .

14. ಶ್ರೀ ಗವಿಸಿದ್ದೇಶ್ವರ ಗದ್ದುಗೆ ದರ್ಶನಕ್ಕೆ ಅವಕಾಶವಿದೆ . ಸಾಮಾಜಿಕ ಅಂತರ ಕಾಪಾಡಿಕೊಂಡು ಭಕ್ತರು ದರ್ಶನ ಪಡೆಯಬಹುದು . ಆದರೆ ಎಲ್ಲಿ ಗುಂಪುಗೂಡಿ ಕೂಡುವಂತಿಲ್ಲ . ಶ್ರೀಮಠದ ಸಮಸ್ತ ಸದ್ಭಕ್ತರಲ್ಲಿ ಅರಿಕೆ ಮಾಡಿಕೊಳ್ಳುವದೇನೆಂದರೆ ಶ್ರೀಮಠ , ಜಿಲ್ಲಾಡಳಿತ , ಜನಪ್ರತಿನಿಧಿಗಳು ಹಾಗೂ ಭಕ್ತರು ಸೇರಿ ತೆಗೆದುಕೊಂಡ ನಿರ್ಣಯವನ್ನು ಪ್ರೀತಿಯಿಂದ ಒಪ್ಪಿಕೊಂಡು ಈ ವರ್ಷ ಸರಕಾರದ ಆದೇಶ ಪಾಲಿಸುತ್ತ ಗವಿಸಿದ್ದೇಶನ ಜಾತ್ರೆಯನ್ನು ಸರಳವಾಗಿ ಆಚರಿಸೋಣ ತಮಗೆಲ್ಲಾ ಗವಿಸಿದ್ದೇಶನ ಕೃಪೆ ಸದಾ ಇರಲೆಂದು ಪ್ರಾರ್ಥಿಸುತ್ತೇವೆ , ಶ್ರೀ ಗವಿಸಿದ್ದೇಶ್ವರ ಮಠ , ಕೊಪ್ಪಳ ,

ಸೂಚನೆ : ಶ್ರೀ ಗವಿಸಿದ್ದೇಶ್ವರ ಮಹಾ ರಥೋತ್ಸವದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಗೂ ಸ್ಥಳೀಯ ಚಾನಲ್‌ಗಳಲ್ಲಿ ಪ್ರಸಾರ ಮಾಡಲಾಗುವದು . ಭಕ್ತರು ಶ್ರೀಮಠದ ಆವರಣಕ್ಕೆ ಬರದೆ ತಾವಿರುವ ಸ್ಥಳದಲ್ಲಿಯೇ ರಥ ದರ್ಶನ ಮಾಡಿಕೊಳ್ಳಬೇಕೆಂದು ಕೇಳಿಕೊಳ್ಳುತ್ತವೆ .

Please follow and like us:
error