ಗೋಮಾಂಸ ತಿನ್ನುತ್ತೇನೆ ಎನ್ನುವವರನ್ನೂ ಜೈಲಿಗೆ ಹಾಕುತ್ತೇನೆ- ಪ್ರಭು ಚವ್ಹಾಣ

Koppal ಗೋಮಾಂಸ ತಿನ್ನುತ್ತೇನೆ ಎನ್ನುವವರನ್ನೂ ಒಳಗೆ ಹಾಕುವಂತೆ ಕಾನೂನು ತಿದ್ದುಪಡಿ ಮಾಡಬೇಕು ಎನ್ನುವ ಸಚಿವ ಜಗದೀಶ್ ಶೆಟ್ಟರ್ ಸಲಹೆಗೆ ಪಶು ಸಂಗೋಪನಾ ಸಚಿವ ಪ್ರಭು ಚಹ್ವಾಣ್ ಪ್ರತಿಕ್ರಿಯಿಸಿ ಹೌದು ಒಳಗೆ ಹಾಕುತ್ತೇನೆ, ಸಿದ್ದರಾಮಯ್ಯ ರನ್ನೂ ಒಳಗೆ ಹಾಕುತ್ತೇನೆ ಎಂದು ಹೇಳಿದರು.

ಜನಸೇವಕ ಸಭೆಯಲ್ಲಿ ಮಾತನಾಡಿದ ಅವರು ಗೋಹತ್ಯೆ ನಿಷೇಧ ಮಾಡಿದ್ರೆ ಕಾಂಗ್ರೆಸ್‌ನವರಿಗೆ ಸಹಿಸಲಾಗುತ್ತಿಲ್ಲ. ಬಿಜೆಪಿಯವರಿಗೆ ಗೋವು ತಾಯಿ ಸಮಾನ. ಕಾಂಗ್ರೆಸ್‌ನವರಿಗೆ ಗೋವಿನ ಹಾಲು, ಮೊಸರು ಬೇಡ ಅನಿಸುತ್ತೆ. ಅದಕ್ಕೆ ಗೋವಧೆಗೆ ಪ್ರಚೋದನೆ ನೀಡ್ತಾರೆ. ಗೋಮಾತೆಯ ರಕ್ಷಣೆ ಆಗಬೇಕು. ಗೋಮಾತೆಯನ್ನು ನಾವೆಲ್ಲ ರಕ್ಷಿಸಬೇಕು. ಎಲ್ಲ ಜಿಲ್ಲೆಗಳಲ್ಲಿ ಕಸಾಯಿಖಾನೆ‌ ಬಂದ್ ಆಗ್ತವೆ. ಗೋವಧೆ ಮಾಡಿದ್ರೆ ಸುಮ್ಮನಿರಲ್ಲ ಎಂದ ಅವರು, ದೇಶದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಶದ ಪ್ರತಿಯೊಬ್ಬ ನಾಗರಿಕನ ಕೊಡುಗೆ ಇರಬೇಕೆಂಬ ಕಾರಣಕ್ಕಾಗಿ ಜನವರಿ 15ರಿಂದ ಹಣಸಂಗ್ರಹ ಅಭಿಯಾನ ಶುರುವಾಗುತ್ತೆ. ಸಾರ್ವಜನಿಕರು ಸಹಾಯ ಮಾಡಿ ಸಹಕರಿಸಬೇಕು ಎಂದರು.

Please follow and like us:
error