ಗ್ರಾ.ಪಂ.ಚುನಾವಣೆ ಡಿ.22,27ಕ್ಕೆ ಫಿಕ್ಸ್

Kannadanet ಗ್ರಾಮ ಪಂಚಾಯಿತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಡಿಸೆಂಬರ್ 22 ಹಾಗೂ 27ರಂದು 2 ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿವೆ. ರಾಜ್ಯದಲ್ಲಿ 5762 ಗ್ರಾಮ ಪಂಚಾಯಿತಿಗಳಿವೆ. ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯೋಗ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದೆ.ಕೋವಿಡ್ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ.

ಡಿಸೆಂಬರ್ 30ಕ್ಕೆ ಮತ ಎಣಿಕೆ ನಡೆಯಲಿದೆ.

Please follow and like us:
error