ಚಾಮರಾಜನಗರ ಘಟನೆ ಸಿಎಂ ಬಿಎಸ್ವೈ, ಸಚಿವ ಸುಧಾಕರ್ ರಾಜೀನಾಮೆ ನೀಡಲಿ- ಸಿದ್ದರಾಮಯ್ಯ

Kannadanet Newsಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ೨೪ ರೋಗಿಗಳ ಸಾವನ್ನಪ್ಪಿದ ಘಟನೆ ಹಿನ್ನೆಲೆಯಲ್ಲಿ ಸಿಎಂ ಬಿಎಸ್ವೈ, ಸಚಿವ ಸುಧಾಕರ್  ರಾಜೀನಾಮೆ ನೀಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ

ಈ ಕುರಿತು ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಅವರು

ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಜನ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು. ಮೃತರ ಶೋಕತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು.

ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಆಕ್ಸಿಜನ್ ಸಿಗದೆ ಉಂಟಾಗಿರುವ ಸರಣಿ ಸಾವುಗಳ ಮುಂದುವರೆದ ಭಾಗವಿದು. ಈ ಸಾವಿಗೆ ರಾಜ್ಯ ಸರ್ಕಾರ, ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಜಿಲ್ಲಾಡಳಿತವೇ ನೇರ ಹೊಣೆ.
ಇದು ಅತ್ಯಂತ ಗಂಭೀರ ಹಾಗೂ ಅಮಾನವೀಯ ಪ್ರಕರಣ. ರಾಜ್ಯದಲ್ಲಿ ಆಡಳಿತಯಂತ್ರ ಕುಸಿದುಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಬಿಜೆಪಿಯವರ ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ. ಜನರ ಜೀವ ರಕ್ಷಿಸಲಾಗದ ಸರ್ಕಾರ ಇರುವುದಕ್ಕಿಂತ ತೊಲಗುವುದೇ ಲೇಸು.

ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಸುಧಾಕರ್ ಅವರು ಪ್ರಕರಣದ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಈ ಪ್ರಕರಣದ ಬಗ್ಗೆ ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಾಧೀಶರ ನೇತೃತ್ವದ ಸಮಿತಿಯ ಮೂಲಕ ತನಿಖೆಯಾಗಬೇಕು ಎಂದು ಒತ್ತಾಯಿಸುತ್ತೇನೆ.

ResignBSY

Please follow and like us:
error