fbpx

ಚಾಮರಾಜನಗರ -99 ಜನರ ವರದಿ ನೆಗೆಟಿವ್

ಚಾಮರಾಜನಗರ :- ಜಿಲ್ಲೆಯಿಂದ ಗುರುವಾರ (ಜೂನ್ 18ರಂದು) ಪರೀಕ್ಷೆಗಾಗಿ ಕಳುಹಿಸಲಾಗಿದ್ದ 99 ಜನರ ಗಂಟಲಿನ ದ್ರವ ಮಾದರಿ ವರದಿಯು ನೆಗೆಟಿವ್ ಬಂದಿದೆ. ಇಂದು 106 ಜನರ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆಗಾಗಿ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಫಲಿತಾಂಶ ನಿರೀಕ್ಷಿಸಲಾಗುತ್ತಿದೆ. ಈ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ತಿಳಿಸಿದ್ದಾರೆ.

ಜಿಲ್ಲೆಗೆ ವಿವಿಧ ರಾಜ್ಯಗಳಿಂದ ಬಂದಿರುವ 54 ಜನರನ್ನು ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಹನೂರು ತಾಲೂಕಿನ ವಿವಿಧ ಹಾಸ್ಟಲ್‍ಗಳಲ್ಲಿ ಇರಿಸಿ ನಿಗಾವಣೆ ಮಾಡಲಾಗುತ್ತಿದೆ.

ಪ್ರಸ್ತುತ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಕ್ವಾರೆಂಟೈನ್ ಕೇಂದ್ರದÀಲ್ಲಿ ಯಾರನ್ನು ನಿಗಾವಣೆ ಮಾಡಲಾಗುತ್ತಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ತಿಳಿಸಿದ್ದಾರೆ.

Please follow and like us:
error
error: Content is protected !!