ಚೀನಾ ಸೇನೆ ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಿದ ಬಿ.ಎಲ್.ಸಂತೋ಼ಷ ರಕ್ಷಣಾ ಸಚಿವರೇ, ಇಲ್ಲವೇ ಸೇನಾ ಮುಖ್ಯಸ್ಥರೇ ?- ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ಪ್ರತಿಪಕ್ಷ ನಾಯಕರಾಗಿ ಅಧಿಕಾರಿಗಳ ಸಭೆಯನ್ನೇ ನಡೆಸಿಲ್ಲ ಎಂದು ಆರ್.ಎಸ್ ಎಸ್ ನಾಯಕ ಬಿ.ಎಲ್.ಸಂತೋ಼ಷ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿರುವ ನನ್ನ ಕಚೇರಿಗೆ ಬಂದರೆ ನಾನು ನಡೆಸಿದ್ದ ಅಧಿಕಾರಿಗಳ ಸಭೆಯ ವಿವರವೂ ಸೇರಿದಂತೆ ನಿಮ್ಮ ಸರ್ಕಾರಕ್ಕೆ ಬುದ್ದಿ ಹೇಳಿ ತಿದ್ದಲು ಏನೆಲ್ಲ ಮಾಡಿದ್ದೇನೆ ಎಂಬ ವಿವರ ನೀಡುವೆ

ಕಾಂಗ್ರೆಸ್ ನೀಡಿದ್ದ ಒಂದು ಕೋಟಿ ರೂಪಾಯಿ ಪರಿಹಾರದ ಲೆಕ್ಕವನ್ನು ಬಿ.ಎಲ್.ಸಂತೋ಼ಷ ಕೇಳಿದ್ದಾರೆ,ಅದನ್ನು ಕೊಡೋಣ. ಮೊದಲು ಪ್ರತಿಯೊಬ್ಬ ಭಾರತೀಯನ ಖಾತೆಗೆ ನರೇಂದ್ರಮೋದಿಯವರು ಜಮೆ ಮಾಡಿರುವ 15 ಲಕ್ಷ ರೂಪಾಯಿಯ ಲೆಕ್ಕ ಕೊಡಿ, ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿರುವ ‘ಪಿಎಂ ಕೇರ್ಸ್’ ನಿಧಿಯ ಲೆಕ್ಕಕೊಡಿ ಎಂದು ಮಾಜಿ ಸಿಎಂ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಚೀನಾ ಸೇನೆ ಎರಡು ಕಿ.ಮೀ.ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ.ಎಲ್.ಸಂತೋ಼ಷ ಅವರೇನು ರಕ್ಷಣಾ ಸಚಿವರೇ, ಇಲ್ಲವೇ ಸೇನಾ ಮುಖ್ಯಸ್ಥರೇ? ಈ ಹೇಳಿಕೆ ನೀಡಬೇಕಾಗಿರುವುದು ಪ್ರಧಾನಮಂತ್ರಿಗಳು . ಅವರಿಂದ ಹೇಳಿಕೆ ಕೊಡಿಸಿ. ಚೀನಾ ಒಳ ನುಸುಳಿಲ್ಲ ಎಂದಾದರೆ, ಹಿಂದೆ ಸರಿದದ್ದು ಎಲ್ಲಿಂದ ಎನ್ನುವುದನ್ನೂ ತಿಳಿಸಲಿ..

ಬಿ.ಎಲ್.ಸಂತೋ಼ಷ್ ಅವರೇ, ಯಡಿಯೂರಪ್ಪನವರಿಗೆ ಅವರಿಗೆ ನೀವು ನೀಡಿರುವ ಶಹಭಾಸ್ ಗಿರಿ ಮನಸ್ಸಿನಿಂದ ಬಂದದ್ದೋ, ನಾಲಿಗೆಯಿಂದಲೋ? ನೀವು ಆಗಾಗ ಕರ್ನಾಟಕಕ್ಕೆ ಬಂದು ಅವರ ವಿರುದ್ಧ ಸಹದ್ಯೋಗಿಗಳನ್ನು ಎತ್ತಿಕಟ್ಟುವುದನ್ನು ನಿಲ್ಲಿಸಿದರೆ ಅವರು ನಿಮಗೆ ಶಹಭಾಸ್‌ಗಿರಿ ಕೊಡಬಹುದೇನೋ ? ಎಂದು ವ್ಯಂಗ್ಯವಾಡಿದ್ದಾರೆ.

Please follow and like us:
error