ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ 20 ದಿನ ಸಂಪೂರ್ಣ ಲಾಕಡೌನ ಮಾಡಿ-ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು :  ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ.‌ ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್ ಡೌನ್ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು -ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ. ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ. ಬರೀ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ, ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು ಎಂದು ಹೇಳಿದ್ದಾರೆ.

Please follow and like us:
error