fbpx

ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಡಿ.ಸಿ. ಸುರಳ್ಕರ್ ವಿಕಾಸ್ ಕಿಶೋರ್ ಭೇಟಿ : ಪರಿಶೀಲನೆ

ಕೊಪ್ಪಳ,: ಕೊಪ್ಪಳ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಅವರು ಇಂದು (ಸೆ.16) ಸಂಜೆ ಭೇಟಿ ನೀಡಿ ಪರಿಶೀಲಿಸಿದರು.

ಕೋವಿಡ್-19 ರೋಗಿಗಳಿಗೆ ನೀಡುತ್ತಿರು ಚಿಕಿತ್ಸೆಯ ಕುರಿತು ಪರಿಶೀಲಿಸಿದ ಜಿಲ್ಲಾಧಿಕಾರಿಗಳು ನಂತರ ಪಿಪಿ ಕಿಟ್ ಧರಿಸಿ ಸ್ವತಃ ತಾವೇ ಖುದ್ದಾಗಿ ಕೋವಿಡ್ ರೋಗಿಗಳ ವಾರ್ಡಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸುವುದರ ಜೊತೆಗೆ ಅಲ್ಲಿ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸಾ ಸೌಲಭ್ಯಗಳ ಕುರಿತು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಕಿಮ್ಸ್ ನಿರ್ದೇಶಕ ಡಾ. ವೈಜನಾಥ ಇಟಗಿ, ಪ್ರಭಾರಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಪ್ರಕಾಶ ಕಬ್ಬರಗಿ ಸೇರಿದಂತೆ ಜಿಲ್ಲಾ ಆಸ್ಪತ್ರೆಯ ವೈದ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Please follow and like us:
error
error: Content is protected !!