ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಜಾಹೀರಾತು ಬಿಡುಗಡೆ ಮಾಡಿಸುವ ಭರವಸೆ ನೀಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು:
ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಜಾಹೀರಾತು ನೀಡವ ಭರವಸೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀಡಿದರು.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ರವರ ನೇತೃತ್ವದಲ್ಲಿ ಕರ್ನಾಟಕ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಬಿ.ಸಿ. ನವೀನ್ ಕುಮಾರ್, ಉಪಾಧ್ಯಕ್ಷರಾದ ಚಲುವರಾಜು, ಸಂಘಟನಾ ಸಂಚಾಲಕರಾದ ಸೋಮಶೇಖರ್ ಕೆರಗೋಡು ರವರನ್ನೊಳಗೊಂಡ ನಿಯೋಗ ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ಭರವಸೆ ನೀಡಿದರು.

ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ದಿನದಲ್ಲಿ ಜಾಹೀರಾತು ನೀಡಲು ಕ್ರಮ ಕೈಗಳ್ಳುತ್ತೇನೆ. ಕೋವಿಡ್ ಸಂದರ್ಭದಲ್ಲಿ ನಿಮ್ಮೆಲ್ಲರ ಸಹಕಾರ ಸರ್ಕಾರಕ್ಕೆ ಬೇಕಾಗಿದೆ ಎಂದರು.

ಪತ್ರಕರ್ತರು ಕೋರೊನಾ ವಾರಿಯರ್ಸ್ ಎಂದು ಘೋಷಿಸಿ ಲಸಿಕೆಯನ್ನು ನೀಡಲು ಆದೇಶಿಸಿದ್ದೆನೆ. ಸಾವಿಗೀಡಾದ ಕುಟುಂಬಕ್ಕೆ ಐದು ಲಕ್ಷ ಪರಿಹಾರ ಕೂಡ ನೀಡಲಾಗುತ್ತಿದೆ ಎಂಬುದನ್ನು ನೆನಪಿಸಿದರು.

ಈಗಾ ತಾವು ನೀಡಿರುವ ಮನವಿಯ ಇನ್ನಿತರ ಬೇಡಿಕೆಗಳನ್ನು ವಾರ್ತಾ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿ ಬಗೆಹರಿಸುವುದಾಗಿ ಭರವಸೆ ನೀಡಿದರು.

ಕೃತಜ್ಞತೆ:
ತಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕರ್ನಾಟಕ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘ ಕೃತಜ್ಞತೆಯನ್ನು ಸಲ್ಲಿಸಿದೆ.
ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿಸಿ, ನಮಗೆ ಬೆಂಬಲ ನೀಡಿದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರಿಗೂ ಸಂಘ ಅಭಾರಿಯಾಗಿದೆ.

Please follow and like us:
error