ಜಿಲ್ಲೆಯಾದ್ಯಂತ ಕನಕದಾಸ ಜಯಂತಿ ಆಚರಣೆ

ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ,: ಸಂತ ಶ್ರೇಷ್ಠ ಭಕ್ತ ಕನಕದಾಸ ಜಯಂತಿ ಅಂಗವಾಗಿ ಜಿಲ್ಲಾಡಳಿತದಿಂದ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಪ್ರಸಕ್ತ ಸಾಲಿನ ಸಂತ ಶ್ರೇಷ್ಠ ಭಕ್ತ ಕನಕದಾಸ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಭಕ್ತ ಕನಕದಾಸರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಭಕ್ತಿ ನಮನ ಸಲ್ಲಿಸಿದರು. ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ, ತಹಶೀಲ್ದಾರ ಜೆ.ಬಿ.ಮಜ್ಜಗಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಿಂಗರಾಜು ಟಿ., ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ದೊಡ್ಡಬಸಪ್ಪ ನೀರಲಕೇರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಅವರು ಸಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಭಕ್ತಿ ನಮನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಹಲವು ಮುಖಂಡರು ಉಪಸ್ಥಿತರಿದ್ದರು.

ಕನಕದಾಸ ವೃತ್ತದಲ್ಲಿ ಪೂಜೆ;

ಸಂತ ಶ್ರೇಷ್ಠ ಭಕ್ತ ಕನಕದಾಸ ಜಯಂತಿಯ ಅಂಗವಾಗಿ ನಗರದ ಕೇಂದ್ರೀಯ ಬಸ್ ನಿಲ್ದಾಣದ ಹತ್ತಿರವಿರುವ ಕನಕದಾಸ ವೃತ್ತದಲ್ಲಿ ಇಂದು (ಡಿ.03) ಬೆಳಿಗ್ಗೆ ಜಿಲ್ಲಾಡಳಿತ ಹಾಗೂ ನಗರಸಭೆ ಸಹಯೋಗದಲ್ಲಿ ಪೂಜಾ ಕಾರ್ಯಕ್ರಮ ಜರುಗಿತು. ಸಂಸದ ಕರಡಿ ಸಂಗಣ್ಣ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು. ಪೂಜಾ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಸಹಾಯಕ ಆಯುಕ್ತರಾದ ನಾರಾಯಣರೆಡ್ಡಿ ಕನಕರೆಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ರಾಮೇಶ್ವರ, ತಹಶೀಲ್ದಾರ ಜೆ.ಬಿ.ಮಜ್ಜಗಿ, ಜಿ.ಪಂ. ಹಾಗೂ ನಗರಸಭೆ ಸದಸ್ಯರು ಮತ್ತು ಸಮುದಾಯದ ಮುಖಂಡರಾದ ಗವಿಸಿದ್ದಪ್ಪ ಹಿಟ್ನಾಳ, ದ್ಯಾಮಣ್ಣ ಕರಿಗಾರ, ಮಂಜುನಾಥ ಬಂಗಾಳಿ, ಸೋಮಶೇಖರ ಮೇಟಿ, ಎಚ್.ಎಸ್. ಮುರಡಿ, ಎಚ್.ಎಚ್.ಮೇಟಿ, ಗುಡದಪ್ಪ ಹಲಗೇರಿ ಹಾಗೂ ಹಲವು ಗಣ್ಯರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Please follow and like us:
error