ಜ. 01ಕ್ಕೆ 06ರಿಂದ 10ನೇ ತರಗತಿಗಳು ಆರಂಭ : ಶಾಲೆಗಳು ನಿಯಮ ಪಾಲಿಸಿ ವಿಕಾಸ್ ಕಿಶೋರ್ ಸುರಳ್ಕರ್

: ವಿದ್ಯಾಗಮ ಅನುಷ್ಠಾನ
ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳು ನಿಯಮ ಪಾಲಿಸಿ : ವಿಕಾಸ್ ಕಿಶೋರ್ ಸುರಳ್ಕರ್
ಕೊಪ್ಪಳ,: ಜನವರಿ. 01 ಕ್ಕೆ 06ರಿಂದ 10ನೇ ತರಗತಿಗಳನ್ನು ಆರಂಭಿಸಲಾಗುತ್ತಿದ್ದು, ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ತರಗತಿಗಳನ್ನು ನಡೆಸಿ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಹೇಳಿದರು.
2021ರ ಜನವರಿ 01 ರಿಂದ ಶಾಲೆಗಳು ಆರಂಭವಾಗುವ ಹಿನ್ನೆಲೆಯಲ್ಲಿ ವಿದ್ಯಾಗಮ ಕಾರ್ಯಕ್ರಮದ ಅನುಷ್ಠಾನ ಹಾಗೂ ಅಗತ್ಯ ಕ್ರಮಗಳ ಕುರಿತ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಸಂಬAಧಪಟ್ಟ ಅಧಿಕಾರಿಗಳು ಶಾಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗಿದ್ದು, ಕಡ್ಡಾಯ ಮಾಸ್ಕ್, ಸಾಮಾಜಿಕ ಅಂತರ ಹಾಗೂ ಥರ್ಮಲ್ ಸ್ಕಾö್ಯನಿಂಗ್ ಸೇರಿದಂತೆ ವಿವಿಧ ರೀತಿಯ ವ್ಯವಸ್ಥೆಗಳನ್ನು ಕೈಗೊಳ್ಳಲು ಕ್ರಮವಹಿಸಬೇಕು. ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಾಗಿಲ್ಲ. ಜ. 01 ರಂದು ಎಷ್ಟು ವಿದ್ಯಾರ್ಥಿಗಳು ಶಾಲೆಗಳಿಗೆ ಬರುತ್ತಾರೆ ಎನ್ನುವುದನ್ನು ಅಂದಾಜಿಸಲಾಗಿದ್ದು, ಇದಕ್ಕೆ ಬೇಕಾಗುವ ಮೂಲಸೌಕರ್ಯಗಳನ್ನು ಒದಗಿಸಲಾಗಿದೆ ಎಂದರು.
ಕೊರೊನಾ ರೋಗ ಲಕ್ಷಣಗಳು ಕಂಡುಬAದರೆ ಮಾತ್ರ ಶಾಲಾ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳಬೇಕು.  ಎಲ್ಲ ಅಧಿಕಾರಿಗಳು ಹಾಗೂ ಸಂಬAಧಪಟ್ಟ ಇಲಾಖೆಗಳ ಸಿಬ್ಬಂದಿಗಳು ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಬೇಕು.  ಕೊಠಡಿಗಳು ಕಡಿಮೆ ಇದ್ದು, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದರೇ ಅವರನ್ನು ವಿಂಗಡಿಸಲಾಗುತ್ತದೆ. ನಾಯಕತ್ವ ಗುಣವಿರುವ ವಿದ್ಯಾರ್ಥಿಗಳನ್ನು ಗುರುತಿಸಿ, ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳನ್ನು ವರ್ಗೀಕರಣ ಮಾಡಲಾಗುತ್ತದೆ. ಅಲ್ಲದೇ ತಂಡಗಳನ್ನು ರಚಿಸಲಾಗುತ್ತದೆ. ನಿಯಮಾವಳಿ ಪ್ರಕಾರವಾಗಿ ಎಲ್ಲ ಕಾರ್ಯಚಟುವಟಿಕೆಗಳನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದರು.
ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ಒಂದು ಕೊಠಡಿಯಲ್ಲಿ 15ರಿಂದ 20 ವಿದ್ಯಾರ್ಥಿಗಳಿಗೆ ಮಾತ್ರ ಬೋಧನೆ ಮಾಡಲಾಗುತ್ತದೆ. ಇದನ್ನು ಹೊರತು ಪಡಿಸಿ ದೊಡ್ಡದಾದ ಕೊಠಡಿ ಇದ್ದರೇ ಹೆಚ್ಚು ವಿದ್ಯಾರ್ಥಿಗಳಿಗೆ ಬೋಧಿಸಲು ಅವಕಾಶವಿದೆ. ಹಾಗಾಗಿ ಈ ಕುರಿತು ಹೆಚ್ಚು ಗಮನ ಹರಿಸಿದ್ದೇವೆ. ಸಿಬ್ಬಂದಿಗಳ ಕೊರತೆ ನೀಗಿಸಲು ಅತಿಥಿ ಶಿಕ್ಷಕರನ್ನು ತೆಗೆದುಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲಾಗುತ್ತದೆ ಎಂದರು.
ಜಿಲ್ಲೆಯ ಪ್ರೌಢ ಶಾಲೆಗಳಲ್ಲಿ 366 ಹುದ್ದೆಗಳು ಖಾಲಿ ಇವೆ. ವಿದ್ಯಾರ್ಥಿಗಳಿಗೆ ತೊಂದರೆಯಾಗದ ರೀತಿಯಲ್ಲಿ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ತೆಗೆದುಕೊಳ್ಳಲಾಗುವುದು. ಸಮುದಾಯದ ಪಾಲ್ಗೊಳ್ಳುವಿಕೆ ಹಾಗೂ ಸಂಘ-ಸAಸ್ಥೆಗಳು ಸಹಭಾಗಿತ್ವದಲ್ಲಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲಾಗುವುದು. ಈ ಮೂಲಕವಾಗಿ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕೆಗೆ ಬೇಕಾದ ವಾತಾವರಣವನ್ನು ನಿರ್ಮಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ದೊಡ್ಡಬಸಪ್ಪ ನೀರಲಕೆರೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ್ ವಿ. ಸೇರಿದಂತೆ ಮತ್ತಿತರರು ಇದೇ ಸಂದರ್ಭದಲ್ಲಿ ಇದ್ದರು.

Please follow and like us:
error