ಕೊಪ್ಪಳ, ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ “ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಭವನ ಮತ್ತು ಸದ್ಭವನಾ ಮಂಟಪ”ದ ಉದ್ಘಾಟನೆ ಕಾರ್ಯಕ್ರಮವನ್ನು ಜ. 26 ರಂದು ಬೆಳಿಗ್ಗೆ 11 ಗಂಟೆಗೆ ಹೊಸಪೇಟೆ ರಸ್ತೆಯ ಅಲ್ಪಸಖ್ಯಾತರ ಮೌಲಾನಾ ಆಜಾದ್ ಭವನದಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ಪಾಟೀಲ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಶ್ರೀಮಂತ ಬಾಳಾಸಾಹೇಬ ಪಾಟೀಲ್ ಅವರು ಘನ ಉಪಸ್ಥಿತರಿರುವರು. ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಕೆ.ರಾಜಶೇಖರ್ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಎಲ್. ಪಾಟೀಲ್ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ್ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ. ನಮೋಶಿ, ಬಸವರಾಜ ಪಾಟೀಲ್ ಇಟಗಿ ಹಾಗೂ ಡಾ. ಚಂದ್ರಶೇಖರ್ ಬಿ. ಪಾಟೀಲ್, ಮುನಿರಾಬಾದ್ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಬಿ.ಹೆಚ್.ಎಮ್., ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಶರಣು ಭೀಮಣ್ಣ ತಳ್ಳಿಕೇರಿ, ಜಿ.ಪಂ. ಉಪಾಧ್ಯಕ್ಷೆ ಬೀನಾ ಗೌಸ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರೇಮಾ ಈರಪ್ಪ ಕುಡಗುಂಟಿ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್. ಪಾಟೀಲ್ ಪಾಲ್ಗೊಳ್ಳುವರು.
