ಟಿಪ್ಪು ಜಯಂತಿ ರದ್ದು ಆದೇಶ ಪುನರ್ ಪರಿಶೀಲಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು , ನ . 6 : ಟಿಪ್ಪು ಜಯಂತಿ ರದ್ದು ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ಸಂಬಂಧ ಜಯಂತಿ ರದ್ದುಗೊಳಿಸಿ ಹೊರಡಿಸಿರುವ ಆದೇಶವನ್ನು ಪುನರ್ ಪರಿಶೀಲಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ . ಈ ಕುರಿತು ಉತ್ತರಪ್ರದೇಶದ ಲಖನೌ ನಿವಾಸಿ ಬಿಲಾಲ್ ಅಲಿ ಶಾ , ಟಿಪ್ಪು ರಾಷ್ಟ್ರೀಯ ಸೇವಾ ಸಂಘ , ಟಿಪ್ಪು ಸುಲ್ತಾನ್ ಯುನೈಟೆಡ್ ಫ್ರಂಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ . ಎಸ್ . ಓಕಾ ನೇತತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು . ನ್ಯಾಯಪೀಠವು ಎರಡೂರು ದಿನದಲ್ಲಿ ಟಿಪ್ಪು ಜಯಂತಿ ಬಗ್ಗೆ ನಿರ್ದೇಶನ ನೀಡಲು ಬರುವುದಿಲ್ಲ . ಖಾಸಗಿ ಅವರು ಜಯಂತಿ ಆಚರಿಸಬಹುದು . ಸರಕಾರ ಶಾಂತಿ ಪಾಲನೆಗೆ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿತು . ಟಿಪ್ಪು ಜಯಂತಿ ರದ್ದುಗೊಳಿಸಿ ಹೊರಡಿಸಿರುವ ಆದೇಶಕ್ಕೆ ಸರಕಾರ ಎಲ್ಲ ದೃಷ್ಟಿಕೋನ ಇಟ್ಟುಕೊಂಡು ಎರಡು ತಿಂಗಳಲ್ಲಿ ಸಮರ್ಪಕ ನಿರ್ಧಾರ ಕೈಗೊಳ್ಳಲು ಸೂಚನೆ ನೀಡಿ , ವಿಚಾರಣೆ ಮುಂದೂಡಿದೆ .

Please follow and like us:
error