ಡಾ.ಬಿ.ಆರ್ ಅಂಬೇಡ್ಕರ್‌ರವರ ಮಹಾ ಪರಿನಿರ್ವಾಣ ದಿನ : ಜಿಲ್ಲಾಡಳಿತದಿಂದ ನಮನ


ಕೊಪ್ಪಳ,: ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಡಾ.ಬಿ.ಆರ್ ಅಂಬೇಡ್ಕರ್‌ರವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು (ಡಿ.06) ಅಂಬೇಡ್ಕರ್‌ರವರಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಯಿತು.
ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಪ್ರಬೇಷನರಿ ಐ.ಎ.ಎಸ್ ಅಧಿಕಾರಿ ವರ್ಣಿತ್ ನೇಗಿ ಹಾಗೂ ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಅವರು ಕ್ಯಾಂಡಲ್ ಬೆಳಗಿಸಿ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.  
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಲಕ್ಷö್ಮಣ ಬಬಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.  ಒಂದು ನಿಮಿಷಗಳ ಮೌನ ಆಚರಿಸಿ ಇದೇ ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್‌ರವರಿಗೆ ಗೌರವ ಸಲ್ಲಿಸಲಾಯಿತು

Please follow and like us:
error