ತಾಲೂಕ ಮಟ್ಟದ ಪತ್ರಕರ್ತರಿಗೂ ಆಯುಷ್ಮಾನ್ ಕಾರ್ಡ ಸೌಲಭ್ಯ- ಸಿ.ಸಿ‌. ಪಾಟೀಲ್

Kannadanet NEWS ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಸಚಿವ ಸಿ.ಸಿ. ಪಾಟೀಲ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗ ಸೋಮವಾರ ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದಿಸಿತು.

ಈ ವೇಳೆ ಆಯುಷ್ಮಾನ್ ಆರೋಗ್ಯ ಕಾರ್ಡ್ ಸೌಲಭ್ಯವನ್ನು ಸರ್ಕಾರದ ಮಾನ್ಯತೆ ಪಡೆದ ಪರ್ತಕರ್ತರಿಗೆ ಕೊಡುತ್ತಿರುವುದು ಶ್ಲಾಘನೀಯ. ಹಾಗೆಯೇ ತಾಲ್ಲೂಕು ಮಟ್ಟದ ಗ್ರಾಮಾಂತರ ಪತ್ರಕರ್ತರಿಗೂ ವಿಸ್ತರಿಸುವಂತೆ ಮನವಿ ಸಲ್ಲಿಸಲಾಯಿತು.

ಇದಕ್ಕೆ ಕೂಡಲೇ ಸ್ಪಂದಿಸಿದ ಸಚಿವರು, ತಾಲ್ಲೂಕು ಮಟ್ಟದ ಪತ್ರಕರ್ತರಿಗೂ ಈ ಸೌಲಭ್ಯ ಸಿಗಲೇಬೇಕು. ಈ ನಿಟ್ಟಿನಲ್ಲಿ
ಶೀಘ್ರವೇ ಈ ಸಂಬಂಧ ಆದೇಶ ನೀಡುವುದಾಗಿ ಭರವಸೆ ನೀಡಿದರು.

ನಿಯೋಗದಲ್ಲಿ ರಾಜ್ಯ ಸಂಘದ ಕಾರ್ಯದರ್ಶಿ ಸಂಜೀವರಾವ್ ಕುಲಕರ್ಣಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಮೈಸೂರಿನ ಎಂ.ಆರ್. ಸತ್ಯನಾರಾಯಣ, ಕಲಬುರ್ಗಿ ಸಂಘದ ಅಧ್ಯಕ್ಷ ಭವಾನಿ ಸಿಂಗ್ ಠಾಕೂರ್, ಸಮಿತಿ ಸದಸ್ಯರಾದ ದೇವೇಂದ್ರಪ್ಪ ಕಪನೂರ್, ಜಿಲ್ಲಾ ಖಜಾಂಚಿ ರಾಜೀವ್ ದೇಶಮುಖ್, ಉತ್ತರ ಕನ್ನಡದ ಜಿ. ಸುಬ್ರಾಯ ಭಟ್ ಬಕ್ಕಳ ಅವರು ಇದ್ದರು.

Please follow and like us:
error