
ಸಿಂಧನೂರು)- ತುಂಗಭದ್ರ ಎಡದಂಡೆ ನಾಲೆಯ ಕೊನೆಯ ಭಾಗದ ರೈತರಿಗೆ ಸಮರ್ಪಕವಾಗಿ ನೀರು ತಲುಪಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು, ನಿರ್ಲಕ್ಷö್ಯ ವಹಿಸಿದ್ದಲ್ಲಿ, ಸಂಬAಧಿಸಿದವರ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರು ಎಚ್ಚರಿಕೆ ನೀಡಿದರು.
ಅವರು ಜು.೪ರ ಶನಿವಾರ ನಗರದ ಹೊರವಲಯದಲ್ಲಿರುವ ಯಲಮಂಚಾಲಿ ವಾಸುದೇವರಾವ್ ಕಲ್ಯಾಣ ಮಂಟಪದಲ್ಲಿ ನಡೆದ ರಾಯಚೂರು-ಕೊಪ್ಪಳ ಜಿಲ್ಲಾಡಳಿತ ಮೂಲಕ ತುಂಗಭದ್ರಾ ಎಡದಂಡೆಯ ಮುಖ್ಯ ನಾಲೆಯ ನೀರು ನಿರ್ವಹಣೆ ಕುರಿತಂತೆ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತುಂಗಭದ್ರ ಎಡದಂಡೆ ಕಾಲುವೆಯ ಎಲ್ಲ ಭಾಗದ ರೈತರು ಬೆಳೆಗಳನ್ನು ಬೆಳೆಯಲು ಸಮರ್ಪಕವಾಗಿ ನೀರು ತಲುಪಿಸುವ ವ್ಯವಸ್ಥೆ ಆಗಬೇಕು, ಇದಕ್ಕಾಗಿ ನಾಲ್ಕು ಇಲಾಖೆಗೊಳಂಡAತೆ ತಾಲ್ಲೂಕು ಮಟ್ಟದ ಸಮಿತಿ ರಚನೆ ಮಾಡಲಾಗುವುದು. ಕಂದಾಯ, ನೀರಾವರಿ, ಜೆಸ್ಕಾಂ ಹಾಗೂ ಪೊಲೀಸ್ ಇಲಾಖೆ ಒಳಗೊಂಡು ಸಮಿತಿ ರಚಿಸಲಾಗುವುದು.
ಸಮಿತಿಯ ಮೇಲುಸ್ತುವಾರಿಯಾಗಿ ಎರಡು ಜಿಲ್ಲೆಯ ಸಹಾಯಕ ಆಯುಕ್ತರನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗುವುದು. ಸಮಿತಿಯಲ್ಲಿರುವ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕೆಂದು ಸೂಚಿಸಿದರು.
ಈಗಾಗಲೇ ತುಂಗಭದ್ರಾ ಎಡದಂಡೆ ನಾಲೆಯ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶದಲ್ಲಿ ರೈತರು ಹೆಚ್ಚಿನ ರೀತಿಯಲ್ಲಿ ಭತ್ತವನ್ನು ಬೆಳೆಯುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ. ರೈತರು ಸಹ ತಮ್ಮ ಬೆಳೆ ಪದ್ಧತಿಯನ್ನು ಬದಲಾಯಿಸಿಕೊಳ್ಳಬೇಕು. ಮಿತ ನೀರಿನ ಬೆಳೆಗಳನ್ನು ಬೆಳೆಯಬೇಕು. ಅಂದಾಗ ಮಾತ್ರ ನೀರು ನಿರ್ವಹಣೆಯ ಹಿಡಿತಕ್ಕೆ ಬರುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ರೈತರು ಅಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ಸಭೆಯಲ್ಲಿದ್ದ ರೈತ ಮುಖಂಡರಿಗೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಅಚ್ಚುಕಟ್ಟು ಪ್ರದೇಶಗಳಿಗೆ ನೀರು ತಲುಪದೇ ತುಂಗಭದ್ರಾ ಎಡದಂಡೆ ನಾಲೆಯ ಯೋಜನೆಯಲ್ಲಿ ಹಾಕಿಕೊಂಡಿರುವ ರೈತರ ಒಳಿತಿನ ಉದ್ದೇಶ ಈಡೇರುತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿಗಳು ಸಹ ನಿರ್ದೇಶನ ನೀಡಿದ್ದು, ಮುಲಾಜಿ ಇಲ್ಲದೆ ಅಕ್ರಮ ನೀರಾವರಿ ತಡೆಗಟ್ಟಿ ಎಂದು ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ಅನಧಿಕೃತ ನೀರಾವರಿ ಅವಕಾಶ ಮಾಡಿಕೊಡಬಾರದು. ನೀರು ನಿರ್ವಹಣೆ ಮಾಡಿ ರೈತರಿಗೆ ಸಮರ್ಪಕವಾಗಿ ನೀರು ಮುಟ್ಟಿಸಬೇಕು ಎಂದರು.
ಅಕ್ರಮ ನೀರಾವರಿ ಕುರಿತಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕರ ಅಧ್ಯಕ್ಷತೆಯಲ್ಲಿ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮಮಟ್ಟದ ಸಮಿತಿ ಅಧಿಕಾರಿಗಳ ಸಮಿತಿಯನ್ನು ರಚಿಸಬೇಕು. ಪ್ರತಿ ತಿಂಗಳಿಗೊಮ್ಮೆ ವಿಶೇಷ ಗ್ರಾಮಸಭೆ ನಡೆಸಿ ಅಕ್ರಮ ನೀರಾವರಿ ಕುರಿತಂತೆ ತನಿಖೆ ಮಾಡಬೇಕು. ಅಕ್ರಮ ನೀರಿನ ಮೂಲ ಕಂಡುಹಿಡಿದು ನೀರುಗಳ್ಳರ ಮೇಲೆ ದೂರು ದಾಖಲಿಸಬೇಕು ಎಂದು ಸಭೆಯಲ್ಲಿದ್ದ ತಾ.ಪಂ. ಇಒಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರರಕಲ್, ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ, ಮುನಿರಾಬಾದ್ ಮುಖ್ಯ ಕಾರ್ಯನಿರ್ವಾಹಕ ಅಭಿಯಂತರ ಮಂಜಪ್ಪ, ರೈತ ಸಂಘದ ರಾಜ್ಯಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಸಭೆಯಲ್ಲಿ ಮಾತನಾಡಿದರು.
ವೇದಿಕೆಯಲ್ಲಿ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ, ರಾಯಚೂರು ಸಹಾಯಕ ಆಯುಕ್ತರಾದ ಸಂತೋಷ ಕಾಮಗೌಡ ಸೇರಿದಂತೆ ರಾಯಚೂರು-ಕೊಪ್ಪಳ ಜಿಲ್ಲೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು. ಕಾರ್ಯಕ್ರಮವನ್ನು ಲಿಂಗಸೂಗುರು ಸಹಾಯಕ ಆಯುಕ್ತ ರಾಜಶೇಖರ ಡಂಬಳ್ ನಿರೂಪಿಸಿ, ಕೊನೆಗೆ ವಂದಿಸಿದರು.