fbpx

ದೀಪ್ತಿ ಭದ್ರಾವತಿಗೆ ವಿಭಾ ಸಾಹಿತ್ಯ ಪ್ರಶಸ್ತಿ

2020 ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಯು ದೀಪ್ತಿ ಭದ್ರಾವತಿಯವರ ‘ಅಷ್ಟೇ’ ಎಂಬ ಹಸ್ತಪ್ರತಿಗೆ ದೊರೆತಿದೆ. ಕವಿ, ವಿಮರ್ಶಕರಾದ ಮಮತಾ ಸಾಗರ ಮತ್ತು ಜಿ.ಪಿ ಬಸವರಾಜು ಅವರು ಅಂತಿಮ ಸುತ್ತಿನ ಆಯ್ಕೆ ತೀರ್ಪುಗಾರರಾಗಿದ್ದರು. ಈ ಪುರಸ್ಕಾರವು ಹತ್ತು ಸಾವಿರ ನಗದು ಹಾಗೂ ಪ್ರಶಸ್ತಿ ಪಲಕವನ್ನು ಒಳಗೊಂಡಿದೆ.

ಕವಿ ಪರಿಚಯ:
ದೀಪ್ತಿ ಭದ್ರಾವತಿಯವರು ದಕ್ಷಿಣ ಕನ್ನಡದ ಮರವಂತೆಯವರು. ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ, ಕುವೆಂಪು ವಿಶ್ವವಿದ್ಯಾಲಯದಲ್ಲಿ ಕನ್ನಡ ಸ್ನಾತಕೋತ್ತರ ಪದವಿ ಹಾಗೂ ಹಿಂದಿಯಲ್ಲಿ ವಿಶಾರದ ಪದವಿಯನ್ನೂ ಪಡೆದಿದ್ದಾರೆ. ಪ್ರಸ್ತುತ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕಾಗದದ ಕುದುರೆ, ಗ್ರೀನ್ ರೂಮಿನಲ್ಲಿ, ಆ ಬದಿಯ ಹೂವು, ಗೀರು – ಇವರ ಪ್ರಕಟಿತ ಕೃತಿಗಳು.
ಇವರ ಪುಸ್ತಕಗಳು ಈಗಾಗಲೇ ಮಾಸ್ತಿ ಕಥಾ ಪ್ರಶಸ್ತಿ, ಗೀತಾ ದೇಸಾಯಿ ದತ್ತಿ ನಿಧಿ ಪ್ರಶಸ್ತಿ, ಮುಂಬೈಯ ಸುಶೀಲಾ ಶೆಟ್ಟಿ ಸ್ಮಾರಕ ಪ್ರಶಸ್ತಿ, ಶಾರದಾ ವಿ ರಾವ್ ದತ್ತಿ ನಿಧಿ ಪ್ರಶಸ್ತಿ, ಹರಪನಹಳ್ಳಿ ಭೀಮವ್ವ ಪ್ರಶಸ್ತಿ, ಮಂಡ್ಯದ ಬಿ.ಎಂ.ಶ್ರೀ ಕಾವ್ಯ ಪ್ರಶಸ್ತಿ, ಸಂಕ್ರಮಣ ಸಾಹಿತ್ಯ ಪ್ರಶಸ್ತಿ, ಸಂಚಯ ಕಾವ್ಯ ಸ್ಪರ್ಧೆ ಬಹುಮಾನ, ಚೇತನಧಾರ ಟ್ರಸ್ಟ್ ಕಾವ್ಯ ಪ್ರಶಸ್ತಿ, ಗುರುಸಿದ್ಧ ಬಸವಶ್ರೀ ಪ್ರಶಸ್ತಿ, ಡಾ. ಪಾಟೀಲ ಪುಟ್ಟಪ್ಪ ಪ್ರಶಸ್ತಿಗಳನ್ನು ಪಡೆದುಕೊಂಡಿವೆ.
ವಿಭಾ ಸಾಹಿತ್ಯ ಪ್ರಶಸ್ತಿ ಸಮಿತಿಯು ದೀಪ್ತಿ ಭದ್ರಾವತಿಯವರಿಗೆ ಅಭಿನಂದಿಸುತ್ತದೆ.

ಎಂದು ವಿಭಾ ಸಾಹಿತ್ಯ ಪ್ರಶಸ್ತಿಯ ಸಮಿತಿ ಪರವಾಗಿ ಪ್ರಕಾಶ & ಸುನಂದಾ ಕಡಮೆ
ಸಂಚಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Please follow and like us:
error
error: Content is protected !!