ಕೊಪ್ಪಳ ; ಜಿಲ್ಲೆಯಲ್ಲಿ, ಕೊಪ್ಪಳ ಕ್ಷೇತ್ರದಲ್ಲಿ ಕಾಂಗ್ರೆಸ್ ಮಾಡಿದ ಎಲ್ಲ ಅಭಿವೃದ್ಧಿ ಕೆಲಸಗಳನ್ನು ನಾವು ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಬಿಜೆಪಿಗೆ ತಕ್ಕ ಪಾಠ ಕಲಿಸುವ ಕಾಲ ದೂರವಿಲ್ಲ ಎಂದು ದೂರಿದರು ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹರಿಹಾಯ್ದರು.

ಕೊಪ್ಪಳದಲ್ಲಿ ನಡೆದ ಗ್ರಾಮ ಪಂಚಾಯತ್ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು
ಕೋವಿಡ್-19 ಹೆಸರಿನಲ್ಲಿ ಬಿಜೆಪಿ ಸರಕಾರ ಲೂಟಿ ಹೊಡೆಯುವ ಕೆಲಸಕ್ಕೆ ಇಳಿದಿದೆಯೇ ಹೊರತು ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಯಡಿಯೂರಪ್ಪ ಸಿಎಂ ಆದನಂತರ ಹೈದ್ರಾಬಾದ್ ಕರ್ನಾಟಕಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದರೆ ಹೊರತು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬಿಡಿಗಾಸು ನೀಡಿಲ್ಲ ಎಂದು ಅವರು ಹರಿ ಹಾಯ್ದರು. ಸಿಂಗಟಾಲೂರ್ ಯೋಜನೆ ಬಗ್ಗೆ ಮಾತನಾಡುವ ಇವರು ತಮ್ಮದೇ ಸರಕಾರ ಇದೆ ಕೃಷ್ಣಾ ಬಿ ಸ್ಕಿಂನ್ನು ಕೊಪ್ಪಳ ತಾಲೂಕಿಗೆ ತರಬಹುದಲ್ಲ ಯಾಕೆ ಮಾಡುತ್ತಿಲ್ಲ ? ಕೃಷ್ಣಾ ಬಿ ಸ್ಕಿಂ ಕೊಪ್ಪಳ ತಾಲೂಕಿಗೆ ತಂದು ಸಂಪೂರ್ಣ ನೀರಾವರಿ ಮಾಡುವ ಗುರಿ ಹೊಂದಿದ್ದೇವೆ ಎಂದರು

ರೈತರ ಹೋರಾಟಗಳಿಗೆ ಸ್ಪಂದಿಸದ ಇವರು ಅಂಬಾನಿ ಮಕ್ಕಳು, ಮೊಮ್ಮಕ್ಕಳು ಹುಟ್ಟಿದರೆ ಅಲ್ಲಿ ಭೇಟಿ ಕೊಡುವ ಪ್ರಧಾನಿ ಮೋದಿಯವರು, ರೈತರು ಸಂಕಷ್ಟ ಅನುಭವಿಸುತ್ತಲೇ ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದು, ಅಲ್ಲಿಗೆ ಭೇಟಿ ಕೊಡಲು, ಅವರ ಸಮಸ್ಯೆ ಆಲಿಸಲು ಪ್ರಧಾನಿ ಬಳಿ ಸಮಯ ಇಲ್ಲ. ಬದಲಾಗಿ ರೈತರ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಬಿಜೆಪಿ ಸರಕಾರ ಎಂದು ಗುಡುಗಿದರು.

ಪಕ್ಷದ ಮುಖಂಡರಾದ ಜನಾರ್ದನ ಹುಲಗಿ, ತಾಲ್ಲೂಕು ಪಂಚಾಯತ್ ಅಧ್ಯಕ್ಷ ಬಾಲಚಂದರ್, ಕಾಟನ್ ಪಾಷಾ, ಅಕ್ಬರ್ ಪಾಷಾ ಪಲ್ಟಾನ್, ಸುರೇಶ್ ಭೂಮರಡ್ಡಿ, ಕೆ.ಬಸವರಾಜ ಹಿಟ್ನಾಳ, ಎಸ್.ಬಿ.ನಾಗರಳ್ಳಿ, ಜುಲ್ಲು ಖಾದ್ರಿ, ಇಂದಿರಾ ಭಾವಿಕಟ್ಟಿ, ಕಿಶೋರಿ, ಮಾಲತಿ ನಾಯಕ್, ರವಿ ಕುರಗೋಡ್ ಇತರರು ಇದ್ದರು. ಕೃಷ್ಣ ಇಟ್ಟಂಗಿ ಕಾರ್ಯಕ್ರಮ ನಿರ್ವಹಿಸಿದರು.