ನಾಳೆ ರಾತ್ರಿ 9 ಗಂಟೆಯಿಂದ ಮೇ 10 ರ ಬೆಳಿಗ್ಗೆ 6 ಗಂಟೆರೆಗೆ ಕರ್ಪ್ಯೂ

ಕನ್ನಡನೆಟ್ : ಕೋವಿಡ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ರಾಜ್ಯದಲ್ಲಿ 14 ದಿನ ಕೋವಿಡ್ ಕರ್ಪ್ಯೂ ಜಾರಿ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ . ನಾಳೆ ರಾತ್ರಿ 9 ಗಂಟೆಯಿಂದ ಕರ್ಪ್ಯೂ ಜಾರಿಗೆ ಬರಲಿದೆ . ಮೇ 10 ರ ಬೆಳಿಗ್ಗೆ 6 ಗಂಟೆವರೆಗೆ ಕರ್ಪ್ಯೂ ಜಾರಿಯಲ್ಲಿರಲಿದೆ . ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ದಿನಸಿ , ಹಾಲು ಮತ್ತು ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ಖರೀದಿಸಲು ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ . ಬೆಳಿಗ್ಗೆ 10 ಕ್ಕೆ ಎಲ್ಲರೂ ವ್ಯಾಪಾರ ಸ್ಥಗಿತಗೊಳಿಸಬೇಕು . ಎಲ್ಲವೂ ಬಂದ್ ಇರುತ್ತದೆ . ಸಾರ್ವಜನಿಕರು ಮನೆ ಬಿಟ್ಟು ಹೊರಬರಬಾರದು . 18 ರಿಂದ 45 ವರ್ಷ ವಯಸ್ಸಿನ ನಾಗರಿಕರಿಗೆ ಉಚಿತ ಲಸಿಕೆ ನೀಡಲು ನಿರ್ಧರಿಸಲಾಗಿದೆ . 45 ವರ್ಷ ಮೇಲ್ಪಟ್ಟವರಿಗೆ ಈಗಾಗಲೇ ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡುತ್ತಿದೆ ಎಂದು ಅವರು ಹೇಳಿದ್ದಾರೆ .

ಸರ್ಕಾರಿ ಸಾರಿಗೆ ಬಸ್‌ಗಳು ಸೇರಿ ಯಾವುದೇ ಸಾರಿಗೆ ಸಂಚಾರ ಇರುವುದಿಲ್ಲ . ಮೆಟ್ರೋ ರೈಲು ಸಂಚಾರ ಬಂದ್ ಆಗಲಿದೆ . ಜವಳಿ , ಕಟ್ಟಡ ನಿರ್ಮಾಣ , ಕೃಷಿ ಬಿಟ್ಟು ಬೇರೆಲ್ಲ ಚಟುವಟಿಕೆ ಬಂದ್ ಆಗಲಿವೆ . ಅಂತರರಾಜ್ಯ ಗೂಡ್ಸ್ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ . ಗಾರ್ಮೆಂಟ್ಸ್ ಹೊರತುಪಡಿಸಿ ಉಳಿದ ಎಲ್ಲ ಉತ್ಪಾದನಾ ಉದ್ಯಮಗಳ ಕಾರ್ಯಾಚರಣೆಗೆ ಅವಕಾಶ ನೀಡಲಾಗಿದೆ . ಇದೇವೇಳೆ , ಕೇಂದ್ರದಿಂದ 800 ಟನ್ ಆಕ್ಸಿಜನ್ ಪೂರೈಕೆ ಆರಂಭವಾಗಿದೆ . ಆಕ್ಸಿಜನ್ ಕೊರತೆ ಸಮಸ್ಯೆ ಬಗೆಹರಿಯುತ್ತದೆ . ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇರುವುದಿಲ್ಲ . 1 ಲಕ್ಷ ರೆಮಿಡಿಸಿವಿ‌ ಚುಚ್ಚುಮದ್ದು ರಾಜ್ಯಕ್ಕೆ ಬರಲಿದೆ . ಕೋವಿಡ್ ಹರಡದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ

Please follow and like us:
error