ನಾವು ಮನುಷ್ಯರ ಪರ, ಮನುಷ್ಯವಿರೋಧಿಗಳ ಪರ ಅಲ್ಲ- ನಳಿನ್ ಕುಮಾರ್ ರಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

.@nalinkateel ಅವರೇ, ನಾವು ಮನುಷ್ಯರ ಪರ, ಮನುಷ್ಯವಿರೋಧಿಗಳ ಪರ ಅಲ್ಲ, ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ,ನಾವು ಕಟ್ಟುವವರ ಪರ, ಕೆಡವುವವರ ಪರ ಅಲ್ಲ.ನಮ್ಮನ್ನು ಮತ್ತು ನಿಮ್ಮನ್ನು ಇದಕ್ಕಿಂತ ಚೆನ್ನಾಗಿ ಹೇಗೆ ಪರಿಚಯಿಸಲಿ ಹೇಳಿ? ಎಂದು ವಿ ಪಕ್ಷ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ರಿಗೆ ತಿರುಗೇಟು ನೀಡಿದ್ದಾರೆ .

ಕೊಪ್ಪಳದಲ್ಲಿ ಇಂದು ಸಿದ್ದರಾಮಯ್ಯ ಯಾರ ಪರ ಸ್ಪಷ್ಟಪಡಿಸಲಿ ಎಂದು ಸವಾಲು ಹಾಕಿದ್ದ ನಳಿನ್ ಕುಮಾರ್ ಕಟೀಲರಿಗೆ ಟ್ವೀಟ್ ಮೂಲಕ ಉತ್ತರ ಕೊಟ್ಟಿದ್ದಾರೆ.

.@nalinkateel ಅವರೇ, ನೀವು ದಲಿತರ ಪರವೋ? ಹಿಂದೂಗಳ ಪರವೋ?

ನೀವೊಬ್ಬ ಹಿಂದುವಾದರೆ, ಅಖಂಡ ಶ್ರೀನಿವಾಸಮೂರ್ತಿ ಯಾಕೆ ಹಿಂದು ಅಲ್ಲ?
ಅವರು ಯಾಕೆ ಹಿಂದು ಆಗದೆ ಕೇವಲ ದಲಿತ ಆಗಿಬಿಟ್ಟರು?

ಹಿಂದುತ್ವದ ಸರಿಯಾದ ವ್ಯಾಖ್ಯಾನ ಏನೆಂದು ನಿಮ್ಮ ಹಿರಿಯರಿಂದ ಕೇಳಿ ತಿಳಿದುಕೊಂಡು ಸ್ಪಷ್ಟಪಡಿಸುವಿರಾ? ಎಂದು ಪ್ರಶ್ನೆ ಮಾಡಿದ್ದಾರೆ. ಇಂದು ಮಣಿಪಾಲ್ ಆಸ್ಪತ್ರೆಯಿಂದ

ಕೊರೊನಾ ಸೋಂಕಿನಿಂದ ಗುಣಮುಖನಾಗಿ ಇಂದು ಆಸ್ಪತ್ರೆಯಿಂದ ಮನೆಗೆ‌ ಮರಳಿದ್ದೇನೆ.
ಕಳೆದ 10 ದಿನಗಳಲ್ಲಿ‌ ಜತನದಿಂದ ನನ್ನ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು.

ವೈದ್ಯರ ಸಲಹೆಯಂತೆ
ಒಂದು ವಾರ ಮನೆಯಲ್ಲಿ ವಿಶ್ರಾಂತಿ‌ ಪಡೆಯಲಿದ್ದೇನೆ ಎಂದು ಹೇಳಿದ್ದಾರೆ

Please follow and like us:
error