ನೀರಿಗಾಗಿ ಕರ್ನಾಟಕ ಬಂದ್

ಮಹದಾಯಿ ನದಿ ನೀರು ಹಂಚಿಕೆ ವಿವಾದದಲ್ಲಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪನ್ನು ವಿರೋಧಿಸಿ ವಿವಿಧ ಸಂಘಟನೆಗಳು ಕರೆಕೊಟ್ಟಿರುವ ಕರ್ನಾಟಕ ಬಂದ್ ಬಹುತೇಕ ಯಶಸ್ವಿಯಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಬಂದ್’ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉತ್ತರ ಕರ್ನಾಟಕದ ಜನರ ನೀರಿನ ಹಾಹಾಕಾರದ ಕೂಗಿಗೆ ಇತರ ಭಾಗದ ಕನ್ನಡಿಗರೂ ಸ್ಪಂದಿಸಿದ್ದಾರೆ.  ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಗದಗ, ಬೆಳಗಾವಿ, ಹಾಸನ, ಮಂಡ್ಯ, ತುಮಕೂರು, ಮೈಸೂರ, ಪ್ರತಿಭಟನೆಗಳು ಜೋರಾಗಿದೆ.  ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಬಸ್ ಮತ್ತು ರೈಲು ಸಂಚಾರ ಸ್ಥಗಿತಗೊಂಡಿದೆ. ಅನೇಕ ಪ್ರದೇಶಗಳಲ್ಲಿ ಅಂಗಡಿ ಮುಂಗಟ್ಟುಗಳು ಸ್ವಯಂಪ್ರೇರಿತವಾಗಿ ಬಂದ್ ಆಗಿವೆ. ಹಲವು ಕಡೆ ಕನ್ನಡ ಸಂಘಟನೆಯ ಕಾರ್ಯಕರ್ತರು ಟೈರ್’ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸರಕಾರ ಕೆಲವಾರು ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದೆ. ರಾಜ್ಯಾದ್ಯಂತ 15 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ ಹೋರಾಟದ ಕಿಚ್ಚು ಭುಗಿಲೆದ್ದಿದೆ,karnatakaಈಗಾಗಲೇ ಹುಬ್ಬಳ್ಳಿ-ಧಾರವಾಡ, ನರಗುಂದ, ನವಲಗುಂದದಲ್ಲಿ  ಅರೆ ಸೇನಾ ತುಕಡಿಗಳು ಗಸ್ತು ತಿರುಗುತ್ತಿವೆ. ಗದಗದಲ್ಲಿ 120 ಜನರ 1 ಬೆಟಾಲಿಯನ್ ಬಿಎಸ್‌ಎಫ್ ಪಡೆಯನ್ನ ನಿಯೋಜಿಸಲಾಗಿದೆ.

Please follow and like us:
error