ಪತ್ರಕರ್ತರನ್ನು ಕರೋನಾ ವಾರಿಯರ್ಸ್ ಎಂದು ಪರಿಗಣಿಸಿ ಲಸಿಕೆ ನೀಡಲು ಸಿಎಂಗೆ ಮನವಿ

ಬೆಂಗಳೂರು ; ಪತ್ರಕರ್ತರನ್ನು ಕರೋನಾ ವಾರಿಯರ್ಸ್ ಎಂದು ಪರಿಗಣಿಸಿ ಲಸಿಕೆ ನೀಡಲು ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಲಾಯಿತು.

ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರು ತಮ್ಮ ಜೀವದ ಹಂಗು ತೊರೆದು , ವೃತ್ತಿ ಬದ್ಧತೆಯಿಂದ ಕೆಲಸ ಮಾಡುತ್ತಿರುವುದು ತಮಗೆ ತಿಳಿದೇ ಇದೆ . ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮದಲ್ಲಿ ಕೆಲಸ ಮಾಡುವವರನ್ನು ಕರೊನಾ ವಾರಿಯರ್ಸ್ ಎಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರೇ ಹೇಳಿದ್ದಾರೆ . ಈಗಾಗಲೇ ಈ ನಿಟ್ಟಿನಲ್ಲಿ ಕೆಲವು ರಾಜ್ಯಗಳು ಪತ್ರಕರ್ತರನ್ನು ಕರೊನಾ ವಾರಿಯರ್ಸ್ ಎಂದು ಘೋಷಿಸಿ , ಉಚಿತ ಲಸಿಕೆ ನೀಡುವುದರಿಂದ ಹಿಡಿದು ಹಲವು ಸೌಲಭ್ಯ ನೀಡುತ್ತಿವೆ . ರಾಜ್ಯ ಸರ್ಕಾರ ಕೂಡ ಈ ನಿಟ್ಟಿನಲ್ಲಿ ಗಮನಹರಿಸಿ , ಕೂಡಲೇ ಪತ್ರಕರ್ತರನ್ನು ಕರೊನಾ ವಾರಿಯರ್ಸ್ ಎಂದು ಘೋಷಿಸಿ , ವಯಸ್ಸಿನ ಮಿತಿ ಇಲ್ಲದೆ ಎಲ್ಲ ಪತ್ರಕರ್ತರಿಗೂ ಉಚಿತ ಕೋವಿಡ್ ಲಸಿಕೆ ನೀಡಬೇಕೆಂದು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆಗ್ರಹಿಸಿದ್ದಾರೆ.

Please follow and like us:
error